ಬೆಳ್ತಂಗಡಿ: ‘ಇಲ್ಲಿನ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಅಕ್ಷರೋತ್ಸವ – 2025 ನಾಡು - ನುಡಿಯ ರಾಷ್ಟ್ರೀಯ ಸಮ್ಮೇಳನ ಹಾಗೂ ಎಕ್ಸೆಲ್ ಪರ್ಬ – 2025 ಕಾಲೇಜಿನ ಅರಮಲೆ ಬೆಟ್ಟ ಆವರಣದಲ್ಲಿ ನ.27 ರಿಂದ 30ರವರೆಗೆ ನಡೆಯಲಿದೆ’ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹೇಳಿದರು.

ನ.27ರಂದು ಬೆಳಿಗ್ಗೆ 9 ಗಂಟೆಗೆ ಆಮಂತ್ರಣ ಪರಿವಾರದ ಸಹಯೋಗದಲ್ಲಿ ಯಕ್ಷಗಾನ ನಾಟ್ಯ ವೈಭವ ನಡೆಯಲಿದ್ದು, ಅಕ್ಷರೋತ್ಸವ ಕಾರ್ಯಕ್ರಮವನ್ನು ಬೆಳಿಗ್ಗೆ 10.30ಕ್ಕೆ ಒಡಿಯೂರು ಗುರುದೇವಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ಚಲನಚಿತ್ರ ನಿರ್ದೇಶಕ ಯೋಗರಾಜ ಭಟ್ ಉದ್ಘಾಟನೆ ಮಾಡಲಿದ್ದಾರೆ. ಪತ್ರಕರ್ತ ಸುರೇಂದ್ರ ಎಸ್.ವಾಗ್ಲೆ ನೂತನ ಗ್ರಂಥ ಲೋಕಾರ್ಪಣೆ ಮಾಡಲಿದ್ದು, ಕಸಾಪ ದ.ಕ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಾಥ ಎಂ.ಪಿ., ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಯದುಪತಿ ಗೌಡ, ಭುಜಬಲಿ ಧರ್ಮಸ್ಥಳ, ವಿಜಯಕುಮಾರ್ ಜೈನ್ ಅಳದಂಗಡಿ ಭಾಗವಹಿಸಲಿದ್ದಾರೆ. ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ, ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ, ಕೃಷಿಕ ಅನಿಲ್ ಭಟ್ ಬಳಂಜ, ದೈವಾರಾಧಕ ಸುರೇಶ್ ಕುಮಾರ್ ಅರಿಗ, ಪಾರಂಪರಿಕ ವೈದ್ಯ ಕುಶಾಲಪ್ಪ ಗೌಡ ಇಜಿಮಾನ್ ಅವರಿಗೆ ಎಕ್ಸೆಲ್ ಅಕ್ಷರ ಗೌರವ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಮಧ್ಯಾಹ್ನ 2 ಗಂಟೆಗೆ ಕವನಗಳ ವಾಚನ – ಗಾಯನ - ನೃತ್ಯ- ಕುಂಚ ಕಾರ್ಯಕ್ರಮ ಕಾಲೇಜಿನ ವಿದ್ಯಾಸಾಗರ ಆವರಣದ ಕುವೆಂಪು ಸಭಾಂಗಣದಲ್ಲಿ ನಡೆಯಲಿದೆ. ಅರಮಲೆ ಬೆಟ್ಟ ಆವರಣದಲ್ಲಿ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ, ಸಂಜೆ 4.30 ಗಂಟೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆಯ ಪ್ರಥಮ ವಾರ್ಷಿಕೋತ್ಸವ ನಡೆಯಲಿದೆ.

ನ.28ರಂದು ಮಧ್ಯಾಹ್ನ ಗಂಟೆ 1.30ಕ್ಕೆ ಬೆಳಗಾವಿ ನಿಡಸೋಸಿ ಮಠದ ನಿಜಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಪ್ರತಿಭಾ ಪುರಸ್ಕಾರ ನಡೆಯಲಿದೆ. ಸಂಜೆ 6.30ಕ್ಕೆ ಎಕ್ಸೆಲ್ ಪರ್ಬ – 2025 ಕಾರ್ಯಕ್ರಮವನ್ನು ಸಿನಿಮಾ ನಟ ರಮೇಶ್ ಅರವಿಂದ್ ಉದ್ಘಾಟಿಸಲಿದ್ದು, ಭಾರತ ಪರಿಕ್ರಮ ಯಾತ್ರಾ ಸಾಧಕ ಸೀತರಾಮ ಕೇದಿಲಾಯ ಭಾಗವಹಿಸಲಿದ್ದಾರೆ.

ನ.29 ರಂದು ಮಧ್ಯಾಹ್ನ 1.30ಕ್ಕೆ ಶೈಕ್ಷಣಿಕ ಸಾಧಕರಿಗೆ ಗೌರವ ನಡೆಯಲಿದ್ದು, ಡಾ.ಎನ್.ಎಂ.ತುಳುಪುಳೆ ಅಳದಂಗಡಿ, ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಚಂದ್ರಮತಿ, ಆರ್ಕಿಟೆಕ್ಟ್ ಸುನಿಲ್ ಜಿ., ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಭಾಗವಹಿಸಲಿದ್ದಾರೆ. ಸಂಜೆ 6.30ರಿಂದ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಂ ಭಾಗವಹಿಸಲಿದ್ದಾರೆ.

ನ.30ರಂದು ಸಂಜೆ 6.30ಕ್ಕೆ ಕಾಲೇಜು ವಾರ್ಷಿಕೋತ್ಸವ ನಡೆಯಲಿದ್ದು, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಪತ್ರಕರ್ತ ಎಸ್.ರವಿ ಕುಮಾರ್, ಡಾ.ರಾಹುಲ್ ದೇವರಾಜ್, ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು ಭಾಗವಹಿಸಲಿದ್ದಾರೆ. ಪ್ರತಿ ದಿನ ಬೆಳಿಗ್ಗೆ 9ರಿಂದ ರಾತ್ರಿ 10.30ರವರೆಗೆ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ ಎಂದರು.

ಪ್ರಾಂಶುಪಾಲರಾದ ನವೀನ್ ಕುಮಾರ್ ಮರಿಕೆ, ರೋಹಿತ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.