ಮಂಗಳೂರು: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಉದ್ದೇಶದೊಂದಿಗೆ ಜಿಲ್ಲೆಯ 1,559 ಶಿಕ್ಷಣ ಸಂಸ್ಥೆಗಳಲ್ಲಿ ನ.14ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಪೋಷಕ– ಶಿಕ್ಷಕರ ಮಹಾಸಭೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ್ ನರ್ವಡೆ ಹೇಳಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಜಿಲ್ಲೆಯ 225 ಕಿರಿಯ ಪ್ರಾಥಮಿಕ ಶಾಲೆ, 658 ಹಿರಿಯ ಪ್ರಾಥಮಿಕ ಶಾಲೆ, 171 ಪ್ರೌಢಶಾಲೆ ಹಾಗೂ 55 ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಈ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಲಾಗಿದೆ. ಕಡಿಮೆ ಮಕ್ಕಳಿದ್ದ ಶಾಲೆಗಳಲ್ಲಿ ಎಲ್ಲ ಪೋಷಕರನ್ನು, ಹೆಚ್ಚು ಮಕ್ಕಳಿರುವ ಶಾಲೆಗಳಲ್ಲಿ ಸ್ಥಳಾವಕಾಶ ಆಧರಿಸಿ ಕನಿಷ್ಠ 100 ಪೋಷಕರನ್ನು ಆಹ್ವಾನಿಸಲಾಗುತ್ತದೆ. ಕಲಿಕೆ ಹಾಗೂ ಸಹಪಠ್ಯ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ ಮಾಡಿದ ಮಕ್ಕಳನ್ನು ಗುರುತಿಸಲಾಗುವುದು’ ಎಂದರು.

ವಿದ್ಯಾರ್ಥಿಗಳ ಪೋಷಕರನ್ನು ಶಿಕ್ಷಣ ಪ್ರಕ್ರಿಯೆಯಲ್ಲಿ ತೊಡಗಿಸುವುದು, ಸರ್ಕಾರಿ ಶಾಲೆ, ಕಾಲೇಜುಗಳ ಬಗ್ಗೆ ಭರವಸೆ ಮೂಡಿಸುವುದು, ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಹಂಚಿಕೆ, ಪೋಷಕರಿಂದ ಕುಂದುಕೊರತೆಗಳ ಬಗ್ಗೆ ಮಾಹಿತಿ ಪಡೆಯುವುದು ಈ ಕಾರ್ಯಕ್ರಮದಲ್ಲಿ ಒಳಗೊಂಡಿದೆ. ಮಕ್ಕಳ ಪ್ರಗತಿ, ಹಾಜರಾತಿ, ಪರೀಕ್ಷೆ ಸಿದ್ಧತೆ, ವಿವಿಧ ಕಾಯ್ದೆಗಳ ಬಗ್ಗೆ ಮಾಹಿತಿಯನ್ನು ಪೋಷಕರ ಜೊತೆ ಹಂಚಿಕೊಳ್ಳಲಾಗುವುದು. ರಾಜ್ಯದಾದ್ಯಂತ ಈ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮೂವರು ಮಕ್ಕಳನ್ನು ಗುರುತಿಸಲಾಗಿದೆ. ಇಬ್ಬರು ಬಂಟ್ವಾಳ ತಾಲ್ಲೂಕು ಮತ್ತು ಒಬ್ಬ ವಿದ್ಯಾರ್ಥಿ ಮಂಗಳೂರು ದಕ್ಷಿಣ ಬ್ಲಾಕ್ ವ್ಯಾಪ್ತಿಯವರಾಗಿದ್ದು, ಇಬ್ಬರು ಮಕ್ಕಳನ್ನು ಮುಖ್ಯವಾಹಿನಿಗೆ ತಂದು ಪುನಃ ಶಾಲೆಗೆ ಸೇರಿಸಲಾಗಿದೆ ಎಂದು ಡಿಡಿಪಿಐ ಜಿ.ಎಸ್. ಶಶಿಧರ್ ತಿಳಿಸಿದರು.

ಡಯಟ್ ಪ್ರಾಂಶುಪಾಲ ಸದಾನಂದ ಪೂಂಜ, ಡಿಡಿಪಿಯು ರಾಜೇಶ್ವರಿ ಇದ್ದರು.

‘ಕಲಿಕಾ ಅವಧಿ ವಿಸ್ತರಣೆ’

ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವೇಳೆ ಆಗಿರುವ ರಜಾ ದಿನಗಳನ್ನು ಸರಿದೂಗಿಸಿಕೊಳ್ಳಲು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಕಲಿಕಾ ಅವಧಿ ವಿಸ್ತರಣೆ ಮಾಡುವಂತೆ ಸರ್ಕಾರದಿಂದ ಆದೇಶ ಬಂದಿದೆ. ಸ್ಥಳೀಯವಾಗಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ ಬೆಳಿಗ್ಗೆ ಅಥವಾ ಸಂಜೆ ಒಂದು ತಾಸು ಹೆಚ್ಚುವರಿ ತರಗತಿ ನಡೆಸಲು ಶಾಲೆ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ಸರ್ಕಾರಿ ರಜೆ ದಿನ ಭಾನುವಾರವೂ ಶಾಲೆ ನಡೆಸಲು ಅನುಮತಿ ದೊರೆತಿದೆ. ಹೀಗಾಗಿ ಡಿಸೆಂಬರ್ ಒಳಗಾಗಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪಠ್ಯಕ್ರಮ ಪೂರ್ಣಗೊಳಿಸಿ ಪುನರ್ ಮನನ ನಡೆಸಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಡಿಡಿಪಿಐ ಶಶಿಧರ್ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.