ಬುಧವಾರ, ಆಗಸ್ಟ್ 10, 2022
25 °C
ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಸಭೆ

ಕಲಾವಿದರಿಗೆ ಮನೋಸ್ಥೈರ್ಯ ತುಂಬಿ: ಸತೀಶ್ ಶೆಟ್ಟಿ ಪಟ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳ್ತಂಗಡಿ : ‘ಕಲಾವಿದರಿಗೆ ಮನೋಸ್ಥೈರ್ಯ ತುಂಬುವ ಕೆಲಸಕ್ಕಾಗಿ ಪಟ್ಲ ಫೌಂಡೇಷನ್ ಸ್ಥಾಪಿಸಲಾಗಿದೆ. ಜಾತಿ– ಧರ್ಮಗಳನ್ನು ಮೀರಿ ಕಲಾವಿದರಿಗೆ ಪ್ರೋತ್ಸಾಹ ನೀಡುವ ಕೆಲಸವಾಗಬೇಕು' ಎಂದು ಯಕ್ಷಧ್ರುವ ಪಟ್ಲ ಫೌಂಡೇಷನ್ ಸ್ಥಾಪಕ ಅಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ಹೇಳಿದರು.

ಗುರುವಾಯನಕೆರೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್ ಬೆಳ್ತಂಗಡಿ ಘಟಕದ ಸಭೆಯಲ್ಲಿ ಭಾನುವಾರ ಅವರು ಮಾತನಾಡಿದರು.

‘ತಾಲ್ಲೂಕಿನಲ್ಲಿ ಕಲಾವಿದರಿಗಾಗಿ ಒಂದು ತರಬೇತಿ ಕೇಂದ್ರ ಆರಂಭವಾಗಬೇಕು’ ಎಂದರು.

ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಮಾತನಾಡಿ, ‘ಕಲೆ ಮತ್ತು ಸಾಹಿತ್ಯದ ಬಗ್ಗೆ ಜನ ಜಾಗೃತಿ ಆಗುತ್ತಿದ್ದಾರೆ. ಕಲಾವಿದರ ಬದುಕಿಗೆ ನ್ಯಾಯ ಒದಗಿಸಬೇಕಾದ ಜನಪ್ರತಿನಿಧಿಗಳು ಮಾತನಾಡುತ್ತಿಲ್ಲ. ಪಟ್ಲ ಫೌಂಡೇಷನ್‌ನಿಂದ ಕಲಾವಿದರಲ್ಲಿ ಆತ್ಮವಿಶ್ವಾಸದ ಬದುಕು ನಿರ್ಮಾಣವಾಗುತ್ತಿದೆ’ ಎಂದರು.

ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ದಯಾನಂದ ಯಳಚಿತ್ತಾಯ, ಮಹೇಶ್ ಶೆಟ್ಟಿ ಸಲಹೆ ಸೂಚನೆಗಳನ್ನು ನೀಡಿದರು.

ಬೆಳ್ತಂಗಡಿ ಘಟಕದ ಅಧ್ಯಕ್ಷ ಭುಜಬಲಿ ಧರ್ಮಸ್ಥಳ, ನೂತನ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ನೂತನ ಸಮಿತಿಯ ಕಾರ್ಯದರ್ಶಿ ಶಿತಿಕಂಠ ಭಟ್, ಸಂಚಾಲಕ ಕಿರಣ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಆದರ್ಶ್ ಜೈನ್ ಇದ್ದರು.

ಘಟಕದ ಸಂಚಾಲಕರಾಗಿದ್ದ ರಘುರಾಮ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು