ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಗಳೂರು: ಅಮೆರಿಕನ್ನರ ಮನಗೆದ್ದ ಯಕ್ಷಗಾನ ತಂಡ

ಆನ್‌ಲೈನ್ ಕ್ಲಾಸ್‌ಗೆ ಬೇಡಿಕೆ: ಪ್ರೊ. ಸಾಮಗ
Published : 25 ಸೆಪ್ಟೆಂಬರ್ 2024, 13:42 IST
Last Updated : 25 ಸೆಪ್ಟೆಂಬರ್ 2024, 13:42 IST
ಫಾಲೋ ಮಾಡಿ
Comments

ಮಂಗಳೂರು: ಯಕ್ಷಗಾನ ಪ್ರದರ್ಶನಕ್ಕೆ 75 ದಿನಗಳ ಅಮೆರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಮತ್ತು ತಂಡದವರು ಮಂಗಳವಾರ ರಾತ್ರಿ ತಾಯ್ನಾಡಿಗೆ ಮರಳಿದ್ದು, ಬಜಪೆ ವಿಮಾನ ನಿಲ್ದಾಣದಲ್ಲಿ ಟ್ರಸ್ಟ್ ಪದಾಧಿಕಾರಿಗಳು ಸ್ವಾಗತಿಸಿದರು.

ಒಂಬತ್ತು ಮಂದಿಯ ತಂಡ ಅಮೆರಿಕ ದೇಶದ ವಿವಿಧೆಡೆಗಳಲ್ಲಿ ಯಕ್ಷಗಾನ ಪ್ರದರ್ಶನ ನೀಡಿದೆ. ಅಮೆರಿಕ ಪ್ರವಾಸದ ಬಗ್ಗೆ ಮಾಹಿತಿ ಹಂಚಿಕೊಂಡು ಪಟ್ಲ ಸತೀಶ್ ಶೆಟ್ಟಿ, ‘ವಿದೇಶದಲ್ಲಿ ತುಳುನಾಡಿನ ಗಂಡುಮೆಟ್ಟಿನ ಕಲೆಯಾಗಿರುವ ಯಕ್ಷಗಾನ ಪ್ರದರ್ಶನ ಮತ್ತು ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು ಹೆಮ್ಮೆಯ ಸಂಗತಿ. ಅಲ್ಲಿನ ಜನರು ಯಕ್ಷ ನಾಟ್ಯ ಮತ್ತು ಭಾಗವತಿಕೆಗೆ ಮನಸೋತು ಕಲಿಯಲು ಆಸಕ್ತಿ ತೋರಿದ್ದಾರೆ’ ಎಂದರು.

ಅಮೆರಿಕದ ಎರಡು ನಗರಗಳಲ್ಲಿ ಪಟ್ಲ ಫೌಂಡೇಶನ್ ದಿನವನ್ನಾಗಿ ಅಲ್ಲಿನ ಮೇಯರ್ ಘೋಷಣೆ ಮಾಡಿದ್ದಾರೆ. ಇದು ಅವಿಸ್ಮರಣೀಯ ಅನುಭವ. ಯಕ್ಷಗಾನಕ್ಕೆ ವಿಶ್ವವ್ಯಾಪಿ ಮನ್ನಣೆ ಸಿಗುತ್ತಿದೆ. ಪಟ್ಲ ಫೌಂಡೇಷನ್ ಟ್ರಸ್ಟ್ ಅಮೆರಿಕ ಘಟಕದ ಅಧ್ಯಕ್ಷ ಅರವಿಂದ ಉಪಾಧ್ಯಾಯ, ಶ್ರೀಧರ ಆಳ್ವ, ಮಹಾಬಲ ಶೆಟ್ಟಿ, ಉಳಿ ಯೋಗೇಂದ್ರ ಭಟ್ ಮತ್ತಿತರರು 20 ರಾಜ್ಯಗಳಲ್ಲಿ ಯಕ್ಷಗಾನ ಪ್ರದರ್ಶನ ಆಯೋಜಿಸಿದ್ದರು’ ಎಂದರು.

ತಂಡದ ಕಲಾವಿದರಾದ ಪ್ರೊ. ಎಂ.ಎಲ್. ಸಾಮಗ ಮಾತನಾಡಿ, ‘ಅಮೆರಿಕದ ಜನರು ನಮ್ಮ ತಂಡಕ್ಕೆ ತೋರಿದ ಪ್ರೀತಿ ಮರೆಯಲಾಗದ್ದು. ಪ್ರತಿ ಪ್ರದರ್ಶನದಲ್ಲಿ 500ಕ್ಕೂ ಹೆಚ್ಚು ಜನರು ಇರುತ್ತಿದ್ದರು. ಕಲಾವಿದರು ಮಿತಿಯಲ್ಲಿದ್ದ ಕಾರಣ ಹೊಂದಿಕೆಯಾಗುವ ಪ್ರಸಂಗವನ್ನು ಆಡಿ ತೋರಿಸಿದೆವು. ಕೆಲವರು ವೇಷ ಹಾಕಲು ಉತ್ಸುಕತೆ ತೋರಿದರು, ಆನ್‌ಲೈನ್ ತರಗತಿ ಬಗ್ಗೆ ಕೆಲವರು ಪ್ರಸ್ತಾಪಿಸಿದ್ದು, ಮುಂದಿನ ದಿನಗಳಲ್ಲಿ ಯೋಚಿಸಲಾಗುವುದು’ ಎಂದರು.

ಪಟ್ಲ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಅಡ್ಯಾರ್ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿಗಳಾದ ಕದ್ರಿ ನವನೀತ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಬಾಳ ಜಗನ್ನಾಥ ಶೆಟ್ಟಿ, ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT