ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಪತ್ತನಾಜೆ’ ಜಾನಪದ ಹಬ್ಬ ನಾಳೆ

Published 17 ಮೇ 2024, 18:49 IST
Last Updated 17 ಮೇ 2024, 18:49 IST
ಅಕ್ಷರ ಗಾತ್ರ

ಮಂಗಳೂರು: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರಿನ ಸಹಕಾರದಲ್ಲಿ ಬಂಟ್ವಾಳ ತಾಲ್ಲೂಕು ಘಟಕವು ‘ಪತ್ತನಾಜೆ’ ಜಾನಪದ ಹಬ್ಬವನ್ನು ಮೇ 19ರಂದು ಬೆಳಿಗ್ಗೆ 8.30ರಿಂದ ಬಿ.ಸಿ.ರೋಡ್‌ನ ಲಯನ್ಸ್ ಸೇವಾ ಮಂದಿರದಲ್ಲಿ ಆಯೋಜಿಸಿದೆ ಎಂದು ಪ್ರಧಾನ ಸಂಚಾಲಕ ಗೋಪಾಲ ಅಂಚನ್ ತಿಳಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಅಂದು ಬೆಳಿಗ್ಗೆ 10 ಗಂಟೆಗೆ ಮಂಜಮ್ಮ ಜೋಗತಿ ಕಾರ್ಯಕ್ರಮ ಉದ್ಘಾಟಿಸುವರು. ಶುದ್ಧ, ಸಾಂಪ್ರದಾಯಿಕ ಆಹಾರವನ್ನು ಯುವಜನರಿಗೆ ಪರಿಚಯಿಸುವ ಉದ್ದೇಶದಿಂದ ಜಾನಪದ ಆಹಾರ ಮೇಳ, ಸಾಂಸ್ಕೃತಿಕ ಮೇಳ, ಜಾನಪದ ಕ್ರೀಡಾಕೂಟ, ಜಾನಪದ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ’ ಎಂದರು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಹಪ್ರಾಧ್ಯಾಪಕ ದಿವಾ ಕೊಕ್ಕಡ ಪತ್ತನಾಜೆ ಬಗ್ಗೆ ವಿಶೇಷ ಉಪನ್ಯಾಸ ನೀಡುವರು. ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ರಾಮ ಭಟ್, ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಮೇಯರ್ ಸುಧೀರ್ ಶೆಟ್ಟಿ, ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ರಮಾನಾಥ ರೈ, ಬಂಟ್ವಾಳದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ತುಕಾರಾಮ ಪೂಜಾರಿ, ಪ್ರಮುಖರಾದ ಎ. ಸಿ. ಭಂಡಾರಿ, ರಘುನಾಥ ಸೋಮಯಾಜಿ, ಅರ್ಜುನ್ ಭಂಡಾರ್‌ಕಾರ್, ಡಿ. ಚಂದ್ರಹಾಸ ಶೆಟ್ಟಿ ರಂಗೋಲಿ, ಜಗನ್ನಾಥ ಚೌಟ ಬದಿಗುಡ್ಡೆ, ಸುಧಾಕರ ಆಚಾರ್ಯ, ಪಮ್ಮಿ ಕೊಡಿಯಾಲ್‌ಬೈಲ್ ಭಾಗವಹಿಸುವರು ಎಂದರು.

ಸಂಘಟನೆಯ ಪ್ರಮುಖರಾದ ರಾಜೇಶ್ ಸ್ಕೈಲಾರ್ಕ್,  ಪ್ರಮೀಳಾ ಮಾಣೂರು, ಅನಿಲ್ ಪಂಡಿತ್, ಪ್ರತಿಭಾ ಪಿ. ಶೆಟ್ಟಿ, ಅಕ್ಬರ್ ಅಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT