ಭಾನುವಾರ, ಜನವರಿ 17, 2021
20 °C
27ಕ್ಕೆ ಯಕ್ಷಗಾನ ಪ್ರದರ್ಶನಕ್ಕೆ ಚಾಲನೆ

ಪಾವಂಜೆ ಮೇಳದ ಯಾನಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೂಲ್ಕಿ: ಪಾವಂಜೆಯ ನಾಗವೃಜ ಕ್ಷೇತ್ರದ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಮೇಳದ ಯಾನಾರಂಭಕ್ಕೆ ಇದೇ 27ರಂದು ಚಾಲನೆ ದೊರೆಯಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ಎಂ. ಶಶೀಂದ್ರ ಕುಮಾರ್ ತಿಳಿಸಿದರು.

ಕ್ಷೇತ್ರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿವಿಧ ಕಾರ್ಯಕ್ರಮಗಳ ಮೂಲಕ ನೂತನ ಮೇಳದ ಯಾನಾರಂಭಗೊಳ್ಳಲಿದ್ದು, ಸಂಜೆ 6ರಿಂದ ರಾತ್ರಿ 11ರ ವರೆಗೆ ಕಾಲ ಮಿತಿಯಲ್ಲಿ ಪೌರಾಣಿಕ ಪ್ರಸಂಗಗಳ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದರು.

ಮೇಳದ ಸಂಚಾಲಕ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ, ‘ಮುಂದಿನ 6 ತಿಂಗಳ ಪ್ರದರ್ಶನದಲ್ಲಿ 38 ಕಲಾವಿದರು ಭಾಗವಹಿಸುವರು. ಮೇ 25ರವರೆಗೆ ಪ್ರದರ್ಶನಗಳ ಬುಕ್ಕಿಂಗ್ ಆಗಿದೆ. ಉಳಿದ ಪ್ರದರ್ಶನಕ್ಕೆ ದೇವಳದ ಭಕ್ತರು ಅವಕಾಶ ಕೋರಿದ್ದು, ಪತ್ತನಾಜೆಯವರೆಗೆ ಎಲ್ಲ ದಿನಗಳಲ್ಲಿ ಬುಕ್ಕಿಂಗ್ ಆಗಿವೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕಾಸರಗೋಡು ಸೇರಿದಂತೆ ವಿವಿಧ ಕಡೆಗಳಲ್ಲಿ ಪ್ರದರ್ಶನ ನಡೆಯುತ್ತದೆ. ಮಳೆಗಾಲದ ಅವಧಿಯಲ್ಲಿ ದೇವಳದಲ್ಲಿ ಪ್ರದರ್ಶನ ಮುಂದುವರಿಯಲಿದೆ’ ಎಂದು ಅವರು ತಿಳಿಸಿದರು.

ದೇವಳದ ಡಾ.ಯಾಜಿ ನಿರಂಜನ ಭಟ್ ಮಾತನಾಡಿ, ವಿವಿಧ ಗಣ್ಯರ ಹಾಗೂ ಕಲಾವಿದರ ಕೂಡುವಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಮಾರಂಭವನ್ನು ಸಂಯೋಜಿಸಲಾಗಿದೆ ಎಂದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು