ಶುಕ್ರವಾರ, ಆಗಸ್ಟ್ 12, 2022
20 °C

ಮಂಗಳೂರು: ಅರ್ಧ ಗಂಟೆಯಲ್ಲಿ 6 ಸೆಂಟಿ ಮೀಟರ್‌ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ದಕ್ಷಿಣ ಕನ್ನಡ ತಾಲ್ಲೂಕಿನ ಪಾವೂರಲ್ಲಿ ಅರ್ಧಗಂಟೆಯಲ್ಲಿ 6.4 ಸೆಂಟಿ ಮೀಟರ್‌ ಮಳೆಯಾಗಿದೆ.

ಬೆಳಿಗ್ಗೆ 8.30ರಿಂದ 9 ಗಂಟೆ ಅವಧಿಯಲ್ಲಿ ಇಲ್ಲಿ ಇಷ್ಟು ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ.

ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆ ನಾಡಾದಲ್ಲಿ 24.7 ಸೆಂಟಿ ಮೀಟರ್‌, ದಕ್ಷಿಣ ಕನ್ನಡ ಜಿಲ್ಲೆ ಮಾವಳ್ಳಿಯಲ್ಲಿ 20.4 ಸೆಂಟಿ ಮೀಟರ್‌ ಮಳೆಯಾಗಿದೆ.

ಪಡೀಲ್ ರೈಲ್ವೆ ಕೆಳಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ಕೈದು ಅಡಿ ನೀರು ನಿಂತಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು