ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಲಿಂಗಾಲು ಗಾಯತ್ರಿ ದೇವಿ ದೇವಸ್ಥಾನಕ್ಕೆ ಪೇಜಾವರ ಸ್ವಾಮೀಜಿ ಭೇಟಿ

Last Updated 11 ಫೆಬ್ರುವರಿ 2023, 16:02 IST
ಅಕ್ಷರ ಗಾತ್ರ

ಬಂಟ್ವಾಳ: ದೇವಾಲಯಗಳಲ್ಲಿ ಪ್ರಧಾನ ದೇವರಿಗೆ ಉತ್ಸವ ನಡೆಸಿದಾಗ ಪರಿವಾರ ದೇವತೆಗಳು ಕೂಡಾ ಸಂತುಷ್ಟರಾಗಿ ಭಕ್ತರನ್ನು ಹರಸುತ್ತಾರೆ.
ಪಿಲಿಂಗಾಲು ಗಾಯತ್ರಿ ದೇವಿ ಜೊತೆಗೆ ಮಹಾಗಣಪತಿ ಮತ್ತು ಗುರು ರಾಘವೇಂದ್ರ ಸ್ವಾಮಿ ಆರಾಧನೆ ಹೆಚ್ಚಿನ ಶಕ್ತಿ ನೀಡುತ್ತದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಕಾಡಬೆಟ್ಟು ಗ್ರಾಮದ ಪಿಲಿಂಗಾಲು ಗಾಯತ್ರಿ ದೇವಿ ದೇವಸ್ಥಾನಕ್ಕೆ ಗುರುವಾರ ಸಂಜೆ ಭೇಟಿ ನೀಡಿ ಅವರು ಆಶೀರ್ವಚನ ನೀಡಿದರು.

ತಂತ್ರಿ ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯ, ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘು ಸಪಲ್ಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಂ. ತುಂಗಪ್ಪ ಬಂಗೇರ, ಪ್ರಮುಖರಾದ ಎಂ.ಬೂಬ ಸಪಲ್ಯ ಮುಂಡಬೈಲು, ಕೆ.ಬಾಬು ಸಪಲ್ಯ ವಗ್ಗ, ನಾಗೇಶ್ ಕಲ್ಲಡ್ಕ, ಉಮೇಶ ಬೋಳಂತೂರು, ಮೋಹನ್ ಕೆ.ಶ್ರೀಯಾನ್ ರಾಯಿ, ಜಗದೀಶ ಕುಂದರ್, ಅಭಿಷೇಕ್ ಪಿಲಿಂಗಾಲು, ದಿನೇಶ ಕಾಡಬೆಟ್ಟು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT