ಮಂಗಳೂರು: ಮೂಡುಬಿದಿರೆ ತಾಲ್ಲೂಕಿನ ನೆಲ್ಲಿಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕೆಲದಿನಗಳ ಹಿಂದೆ ವ್ಯಕ್ತಿಯೊಬ್ಬರಿಗೆ ಕಾಲರಾ ದೃಢಪಟ್ಟಿದ್ದು, ಅವರು ಈಗ ಚೇತರಿಸಿಕೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್.ತಿಮ್ಮಯ್ಯ ಹೇಳಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ನಿಫಾ, ಮಂಕಿ ಪಾಕ್ಸ್, ಕಾಲರಾ, ಎಚ್1ಎನ್1 ರೋಗಗಳ ಬಗ್ಗೆ ಜನರು ಎಚ್ಚರ ವಹಿಸಬೇಕು. ಉಡುಪಿ ಜಿಲ್ಲೆಯ ಹೋಟೆಲ್ವೊಂದರಲ್ಲಿ ಆಹಾರ ಸೇವಿಸಿದ ವ್ಯಕ್ತಿಗೆ ಕಾಲರಾ ದೃಢಪಟ್ಟಿತ್ತು. ಆ ಹೋಟೆಲ್ ಮೇಲೆ ನಿಗಾವಹಿಸಲಾಗಿದೆ. ಸದ್ಯ ಯಾವುದೇ ಆತಂಕವಿಲ್ಲ. ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸುವಂತೆ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೂಚನೆ ನೀಡಲಾಗಿದೆ’ ಎಂದರು.

ಕಾಲರಾ ತಡೆಗಟ್ಟುವ ನಿಟ್ಟಿನಲ್ಲಿ ಹೋಟೆಲ್ ಮಾಲೀಕರ ಸಂಘದ ಸಭೆ ನಡೆಸಲಾಗಿದೆ. ಗ್ರಾಹಕರಿಗೆ ಬಿಸಿ ನೀರು, ಶುಚಿಯಾದ ಆಹಾರ, ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸೂಚಿಸಲಾಗಿದೆ. ವಾಂತಿ–ಬೇಧಿ ಕಾಣಿಸಿಕೊಂಡಲ್ಲಿ ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು. ತರಕಾರಿ, ಹಣ್ಣು ತೊಳೆದು ತಿನ್ನಬೇಕು. ಬಿಸಿಯಾದ ಪದಾರ್ಥ ಸೇವಿಸಿದರೆ ಉತ್ತಮ. ಕಾಲರಾ ಸೋಂಕು ಅತಿಸಾರ, ನಿರ್ಜಲೀಕರಣಕ್ಕೆ ಕಾರಣವಾಗಬಹುದು ಎಂದು ಹೇಳಿದರು.

ಜಿಲ್ಲೆಯಲ್ಲಿ ನಿಫಾ ಪ್ರಕರಣ ಪತ್ತೆಯಾಗಿಲ್ಲ. ನೆರೆಯ ಕೇರಳ ಜಿಲ್ಲೆಯಲ್ಲಿ ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ಮುನ್ನೆಚ್ಚರಿಕೆ ವಹಿಸಲಾಗಿದೆ. ಜಿಲ್ಲೆಯಲ್ಲಿ ಮಂಕಿ ಪಾಕ್ಸ್ ಪ್ರಕರಣ ಕಂಡುಬಂದಿಲ್ಲ. ಹೊರದೇಶಗಳಿಂದ ಬರುವ ವಿಮಾನಗಳು, ನವ ಮಂಗಳೂರು ಬಂದರಿಗೆ ಬರುವ ಹಡಗುಗಳ ಸರ್ವೇಕ್ಷಣೆ ಮಾಡಲಾಗುತ್ತಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಆರು ಹಾಸಿಗೆಗಳು ಕಾಯ್ದಿಡಲಾಗಿದೆ. ಈ ಕಾಯಿಲೆಯು ಸಿಡುಬು ರೋಗವನ್ನು ಹೋಲುತ್ತದೆ, ಇದಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ರೋಗ ನಿರೋಧಕ ಶಕ್ತಿ ಇದ್ದವರು ಚೇತರಿಸಿಕೊಳ್ಳುತ್ತಾರೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಈ ತಿಂಗಳಿನಲ್ಲಿ 14 ಮಲೇರಿಯಾ ಪ್ರಕರಣ ಪತ್ತೆಯಾಗಿದೆ. ಬೇರೆ ರಾಜ್ಯಗಳಿಂದ ಬಂದಿರುವ ಕಾರ್ಮಿಕರಲ್ಲಿ ಈ ಜ್ವರ ಕಂಡುಬಂದಿದೆ. ಜನವರಿಯಿಂದ ಈವರೆಗೆ ಜಿಲ್ಲೆಯಲ್ಲಿ ಎಚ್1ಎನ್1, 126 ಪ್ರಕರಣ, ಡೆಂಗಿ 497 ಪ್ರಕರಣ ಪತ್ತೆಯಾಗಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಉಳೆಪಾಡಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸುಜಯ ಭಂಡಾರಿ ಇದ್ದರು.

- ಮಂಕಿ ಪಾಕ್ಸ್ ಲಕ್ಷಣ

ಕಣ್ಣು ಬಾಯಿ ಚರ್ಮ ಮೂಗಿನಿಂದ ಸ್ರವಿಸುವ ದ್ರವ ಮತ್ತು ಉಸಿರಾಟದ ಮೂಲಕ ಮಂಕಿ ಪಾಕ್ಸ್ನ ವೈರಸ್ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಈ ಸೋಂಕು ಗುದದ್ವಾರ ಜನನಾಂಗ ಎದೆ ಮುಖ ಅಥವಾ ಬಾಯಿಯ ಮೇಲೆ ದದ್ದುಗಳಿಂದ ಪ್ರಾರಂಭವಾಗುತ್ತದೆ. ಅನಂತರ ದೇಹದ ಇತರ ಭಾಗಗಳಿಗೆ ವಿಸ್ತರಿಸಬಹುದು. ಜ್ವರ ತಲೆನೋವು ಊದಿಕೊಂಡ ದುಗ್ಧರಸ ಗ್ರಂಥಿಗಳು ಸ್ನಾಯು ನೋವು ಅಥವಾ ಶೀತ ಇತರ ರೋಗಲಕ್ಷಣಗಳಾಗಿವೆ ಎಂದು ಜಿಲ್ಲಾ ಸರ್ವೇಕ್ಷಣಾಕಾರಿ ಡಾ.ನವೀನ್ಚಂದ್ರ ಕುಲಾಲ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.