ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ: ಮದ್ಯ ಖರೀದಿಗೆ ಜನಸಾಗರ

Last Updated 4 ಮೇ 2020, 8:27 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲೆಯಾದ್ಯಂತ ಸೋಮವಾರ ಬೆಳಿಗ್ಗೆ 9 ಗಂಟೆಯಿಂದ ಮದ್ಯ ಮಾರಾಟ ಆರಂಭವಾಗಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಜನರು ಮದ್ಯ ಖರೀದಿಗೆ ಮುಗಿಬಿದ್ದಿದ್ದಾರೆ.

ಜಿಲ್ಲೆಯ 174 ಮದ್ಯದಂಗಡಿಗಳಲ್ಲಿ ಮಾರಾಟ ಆರಂಭವಾಗಿದೆ. ಎಲ್ಲ ಕಡೆಗಳಲ್ಲೂ ಗ್ರಾಹಕರ ನಡುವೆ ಅಂತರ ಕಾಯ್ದುಕೊಳ್ಳಲು ಸರದಿಯಲ್ಲಿ ಮಾರ್ಕಿಂಗ್ ಮಾಡಲಾಗಿದೆ. ಬ್ಯಾರಿಕೇಡ್, ರಿಬ್ಬನ್ ಕಟ್ಟಲಾಗಿದೆ.

ಬೆಳಿಗ್ಗೆಯಿಂದಲೇ ಮದ್ಯದಂಗಡಿಗಳಲ್ಲಿ ಭಾರಿ ಪ್ರಮಾಣದ ವಹಿವಾಟು ನಡೆಯುತ್ತಿದೆ. ಪೊಲೀಸರು ಮತ್ತು ಅಬಕಾರಿ ಅಧಿಕಾರಿಗಳು ಗಸ್ತು ತಿರುಗುತ್ತಿದ್ದು, ನಿಗಾ ವಹಿಸಿದ್ದಾರೆ.

ಲಾಕ್ ಡೌನ್ ಸಡಿಲಿಕೆ: ಕೇಂದ್ರ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆಯಿಂದ ಲಾಕ್‌ ಡೌನ್ ಸಡಿಲಿಸಿದ್ದು, ಕೆಲವು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.

ಅಂಗಡಿ, ಮುಂಗಟ್ಟುಗಳು, ಗ್ಯಾರೇಜ್ ಸೇರಿದಂತೆ ಹಲವು ಬಗೆಯ ಚಟುವಟಿಕೆಗಳು ಆರಂಭವಾಗಿವೆ. ಬ್ಯಾಂಕುಗಳು ಹೆಚ್ಚಿನ ಪ್ರಮಾಣದ ಸೇವೆ ಆರಂಭಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT