ಬುಧವಾರ, ಜೂನ್ 23, 2021
22 °C

ಮಂಗಳೂರು: ಸುಗಂಧ ದ್ರವ್ಯ ತಯಾರಿಕಾ ಕಂಪನಿಯಲ್ಲಿ ಬೆಂಕಿ ಅವಘಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಗಂಧ ದ್ರವ್ಯ ತಯಾರಿಕಾ ಕಂಪನಿಯಲ್ಲಿ ಬೆಂಕಿ ‌ಅವಘಡ

ಮಂಗಳೂರು: ಇಲ್ಲಿನ ಬಜ್ಪೆ ಬಳಿ ಇರುವ ಸುಗಂಧ ದ್ರವ್ಯ ತಯಾರಿಕಾ ಕಂಪನಿಯಲ್ಲಿ ಶನಿವಾರ ಬೆಂಕಿ ‌ಅವಘಡ ಸಂಭವಿಸಿದೆ.

ಇದು ನೂತವಾಗಿ ನಿರ್ಮಾಣಗೊಂಡ ಕಂಪನಿಯಾಗಿದ್ದು, ಇಲ್ಲಿನ ರಾಸಾಯನಿಕಗಳಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ.

ಸದ್ಯಕ್ಕೆ ಯಾವುದೇ ಸಾವು-ನೋವು ವರದಿಯಾಗಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳು ಬಂದಿದ್ದು, ಕಾರ್ಯಾಚರಣೆ ನಡೆಸುತ್ತಿವೆ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ, ಯಾರಿಗೂ ಅಪಾಯ ಆಗಿಲ್ಲ ಎಂದು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು