ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿನ ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಭರವಸೆ ನೀಡಿದರು.

ಉಳ್ಳಾಲ ತಾಲ್ಲೂಕಿನ ಬಟ್ಟಪಾಡಿಯಲ್ಲಿ ಕಡಲ್ಕೊರೆತದಿಂದ ಹಾನಿಗಿಳಗಾದ ಪ್ರದೇಶಕ್ಕೆ ಮಂಗಳವಾರ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ಸಮಸ್ಯೆ ಕುರಿತು ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿದರು. ಸ್ಥಳೀಯ ಮುಖಂಡರು, ಸಂತ್ರಸ್ತರು ಸಮಸ್ಯೆ ಬಗ್ಗೆ ಮುಖ್ಯಮಂತ್ರಿಯವರಿಗೆ ವಿವರಿಸಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ, 'ಪ್ರತಿ ವರ್ಷವೂ ಕಡಲ್ಕೊರೆತ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈ ಸಮಸ್ಯೆಯಿಂದ ಮನೆಗಳನ್ನು ಕಳೆದುಕೊಂಡವರಿಗೆ ಪುನರ್ವಸತಿ ಕಲ್ಪಿಸುತ್ತೇವೆ' ಎಂದರು.

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್,

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.