ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಮಾನಾಥ ರೈ ನ್ಯಾಯೋಚಿತ ಜನಪ್ರತಿನಿಧಿ

ಪೆರ್ನೆಯಲ್ಲಿ ನಡೆದ ರಮಾನಾಥ ರೈ 70ನೇ ಜನ್ಮದಿನ ಆಚರಣೆಯಲ್ಲಿ ಮಧು ಬಂಗಾರಪ್ಪ
Last Updated 15 ಸೆಪ್ಟೆಂಬರ್ 2022, 5:34 IST
ಅಕ್ಷರ ಗಾತ್ರ

ಉಪ್ಪಿನಂಗಡಿ: ‘ರಮಾನಾಥ ರೈ ಶುಭ್ರ ಮನಸ್ಸಿನ, ಸಾಮಾಜಿಕ ಕಳಕಳಿಯುಳ್ಳ, ನ್ಯಾಯೋಚಿತ ಜನಪ್ರತಿನಿಧಿ’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಮಧು ಬಂಗಾರಪ್ಪ ಶ್ಲಾಘಿಸಿದರು.

ಬುಧವಾರ ಪೆರ್ನೆಯಲ್ಲಿ ಬೆಳ್ಳಿಪ್ಪಾಡಿ ರಮಾನಾಥ ರೈ ಜನ್ಮದಿನ ಅಭಿನಂದನಾ ಸಮಿತಿ, ವಿಟ್ಲ-ಉಪ್ಪಿನಂಗಡಿ ಯುವ ಕಾಂಗ್ರೆಸ್ ಘಟಕ, ಪೆರ್ನೆ- ಬಿಳಿಯೂರು ವಲಯ ಕಾಂಗ್ರೆಸ್ ಘಟಕಗಳ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ರೈ ಅವರು ಸಚಿವರಾಗಿದ್ದಾಗ ಪಕ್ಷ ರಾಜಕಾರಣ ಮಾಡದೆ, ರಾಜ್ಯದ ಎಲ್ಲಾ ಜನತೆಯನ್ನು ಸಮಾನರಾಗಿ ಕಂಡು ನ್ಯಾಯ ಒದಗಿಸಿದ ಅಪರೂಪದ ರಾಜಕಾರಣಿ’ ಎಂದು ಬಣ್ಣಿಸಿದರು.

ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ರಕ್ತದಾನ ಶಿಬಿರ ಉದ್ಘಾಟಿಸಿದರು. ಪೆರ್ನೆಯ ವೇದಮೂರ್ತಿ ವಿದ್ವಾನ್ ಕೆ. ಕೃಷ್ಣಮೂರ್ತಿ ಕಾರಂತ, ಕೆಮ್ಮಾರ ಸಂಶುಲ್ ಉಲೇಮ ಮೆಮೋರಿಯಲ್ ಕಾಲೇಜಿನ ಅಧ್ಯಕ್ಷ ಎಸ್.ಬಿ. ಮುಹಮ್ಮದ್ ದಾರಿಮಿ, ಪುತ್ತೂರು ಮಾಯಿದೆ ದೇವುಸ್ ಚರ್ಚ್‌ನ ಧರ್ಮಗುರು ಲಾರೆನ್ಸ್ ಮಸ್ಕರೇನಸ್ ಮಾತನಾಡಿದರು.

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ. ಅಧ್ಯಕ್ಷತೆ ವಹಿಸಿದ್ದರು. ರಾಣಿ ಅಬ್ಬಕ್ಕ ಸಂಶೋಧನಾ ಕೇಂದ್ರದ ಸಂಸ್ಥಾಪಕ ತುಕಾರಾಮ ಪೂಜಾರಿ ಸೇರಿದಂತೆ ಸಮಾಜದ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 34 ಮಂದಿಯನ್ನು ಗೌರವಿಸಲಾಯಿತು. ರಮಾನಾಥ ರೈ ಅವರನ್ನು ಸನ್ಮಾನಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಕೆಪಿಸಿಸಿ ಸದಸ್ಯ ಡಾ. ಬಿ. ರಘು, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಪೆರ್ನೆ ಸಹಕಾರಿ ಸಂಘದ ಅಧ್ಯಕ್ಷ ತೋಯಾಜಾಕ್ಷ ಶೆಟ್ಟಿ, ಪೆರ್ನೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುನಿಲ್ ನೆಲ್ಸನ್ ಪಿಂಟೊ, ಸಾಗರದ ಕಾಂಗ್ರೆಸ್ ಮುಖಂಡ ಭಾಸ್ಕರ ಶೆಟ್ಟಿ ಇದ್ದರು.

ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿ ಪ್ರವೀಣ್ ಚಂದ್ರ ಆಳ್ವ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ವಿಜಯಕುಮಾರ್ ಸೊರಕೆ, ಎಂ.ಎಸ್. ಮುಹಮ್ಮದ್, ಸರ್ವೋತ್ತಮ ಗೌಡ, ಸತೀಶ್ ಕುಮಾರ್ ಕೆಡೆಂಜಿ, ದಿವ್ಯಪ್ರಭಾ ಚಿಲ್ತಡ್ಕ, ಉಷಾ ಅಂಚನ್, ರಾಜೀವಿ ರೈ, ಕೆ.ಪಿ. ಥೋಮಸ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಯುನಿಕ್, ಪೆರ್ನೆ ವಲಯ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಶಾಫಿ, ತನಿಯಪ್ಪ ಪೂಜಾರಿ ಬೆಳಿಯೂರು, ಕೃಷ್ಣರಾವ್,ಉಮಾನಾಥ ಶೆಟ್ಟಿ ಪಂಜಿಗುಡ್ಡೆ ಈಶ್ವರಭಟ್ ಇದ್ದರು.

ಮುರಳೀಧರ ರೈ ಸ್ವಾಗತಿಸಿದರು. ನಿರಂಜನ್ ರೈ ಮಠಂತಬೆಟ್ಟು ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT