ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂರ್ಣ ಪ್ರಮಾಣದ ಭೌತಿಕ ತರಗತಿ ಅ.5ರಿಂದ

Last Updated 4 ಅಕ್ಟೋಬರ್ 2021, 16:27 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆ ಇರುವ ಕಾರಣ ಮಂಗಳವಾರದಿಂದ (ಅ.5) 6ನೇ ತರಗತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ಭೌತಿಕ ತರಗತಿ ನಡೆಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಅ.1ರಿಂದ ರಾಜ್ಯದಾದ್ಯಂತ ಪೂರ್ಣ ಪ್ರಮಾಣದಲ್ಲಿ ಭೌತಿಕ ತರಗತಿ ನಡೆಸಲು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಅನುಮತಿ ಕೋರಿ, ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದರು.

ಜಿಲ್ಲೆಯ ಎಲ್ಲ ಶಾಲಾ ಶಿಕ್ಷಕರು, ಸಿಬ್ಬಂದಿಗೆ ಕೋವಿಡ್ ತಡೆ ಲಸಿಕೆ ನೀಡಲಾಗಿದೆ. ಶಾಲೆಗಳನ್ನು ಪ್ರಾರಂಭಿಸಿ, ವಿದ್ಯಾರ್ಥಿಗಳ ಕಲಿಕೆಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವುದು ಅವಶ್ಯವಾಗಿದೆ. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಸರ್ಕಾರಿ, ಅನುದಾನಿತ, ಅನುದಾನಿತ ಶಿಕ್ಷಣ ಸಂಸ್ಥೆಗಳು ಪೂರ್ಣ ಪ್ರಮಾಣದ ಭೌತಿಕ ತರಗತಿ ನಡೆಸಬೇಕು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT