ಬಂಟ್ವಾಳ: ಇಲ್ಲಿನ ವಗ್ಗ ಸಮೀಪದ ಕಾಡ ಬೆಟ್ಟು ಗ್ರಾಮ ಪಿಲಿಂಗಾಲು ಗಾಯತ್ರೀ ದೇವಿ ದೇವಸ್ಥಾನದಲ್ಲಿ 20ನೇ ವರ್ಷದ ಪ್ರತಿಷ್ಠಾ ವರ್ಧಂತಿ ಉತ್ಸವ ಮತ್ತು 52ನೇ ವರ್ಷದ ಭಜನಾ ಮಂಗಲೋತ್ಸವ ಕಾರ್ಯಕ್ರಮ ಮಾರ್ಚ್ 30ರಿಂದ 31ರವರೆಗೆ ನೆರವೇರಲಿದೆ.

ಮಾರ್ಚ್ 30ರಂದು ಬೆಳಿಗ್ಗೆ 7.30ರಿಂದ ಗಣಯಾಗ, ನವಕ ಪ್ರಧಾನ ಹೋಮ, ಮಹಾಗಣಪತಿ ಸಹಿತ ಗುರು ರಾಘವೇಂದ್ರ ಸ್ವಾಮಿ ಮತ್ತು ಗಾಯತ್ರೀ ದೇವಿ ವಿಗ್ರಹಕ್ಕೆ ಕಲಶಾಭಿಷೇಕ, 11 ಗಂಟೆಗೆ ಆಶ್ಲೇಷಾ ಬಲಿ, ನಾಗತಂಬಿಲ, ಕಾಲರಕ್ತೇಶ್ವರಿಗೆ ಪರ್ವ, ಮಧ್ಯಾಹ್ನ 1ಗಂಟೆಗೆ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

31ರಂದು ಬೆಳಿಗ್ಗೆ 8 ಗಂಟೆಗೆ ಗಣ ಯಾಗ, ಗಾಯತ್ರೀ ಯಾಗ, 10.30ರಿಂದ ರಕ್ತೇಶ್ವರಿ, ಮಹಿಷಂದಾಯ, ಅಣ್ಣಪ್ಪ ಪಂಜುರ್ಲಿ ದೈವಕ್ಕೆ ಪರ್ವ, ಸಾಮೂ ಹಿಕ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6 ಗಂಟೆಗೆ ಭಜನೆ, 6.30ರಿಂದ ಕಟೀಲು ಮೇಳದಿಂದ ಯಕ್ಷಗಾನ ಬಯಲಾಟ, ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಳದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-29-1675506277

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.