ಗುರುವಾರ , ಜೂನ್ 17, 2021
28 °C

ನಾಳೆಯಿಂದ ಪಿಲಿಕುಳ ಮೃಗಾಲಯ ವೀಕ್ಷಣೆಗೆ ಮುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಪಿಲಿಕುಳ ಡಾ. ಶಿವರಾಮ ಕಾರಂತ ನಿಸರ್ಗಧಾಮದ ಮೃಗಾಲ ಯವು ನಾಳೆಯಿಂದ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲಿದೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪಿಲಿಕುಳ ಜೈವಿಕ ಉದ್ಯಾನದ ನಿರ್ದೇಶಕ ಎಚ್‌‌.ಜೆ. ಭಂಡಾರಿ ತಿಳಿಸಿದ್ದಾರೆ.

ಸಂದರ್ಶಕರು ಮಾಸ್ಕ್‌ ಅನ್ನು ಕಡ್ಡಾಯವಾಗಿ ಸರಿಯಾಗಿ ಧರಿಸಬೇಕು. ಪ್ರವೇಶ ದ್ವಾರದಲ್ಲಿ ಥರ್ಮಲ್‌ ಸ್ಕ್ಯಾನಿಂಗ್‌ಗೆ ಒಳಗಾಗಬೇಕು. ಕೈಗಳನ್ನು ಸ್ಯಾನಿಟೈಸ್‌ ಮಾಡಲಾಗುವುದು. ಅಂತರ ಕಾಯ್ದುಕೊಳ್ಳಬೇಕು. ಮೃಗಾಲಯದಲ್ಲಿ 76 ಸಿಸಿಟಿವಿ ಕ್ಯಾಮೆರಾ ಅಳವಡಿಸಲಾ
ಗುತ್ತಿದೆ. ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕೋರಿದ್ದಾರೆ.

ಪ್ರವೇಶ ದ್ವಾರದ ಬ್ಕಾಕ್ಸ್‌‌ ಆಫೀಸ್‌‌ನಲ್ಲೇ ಟಿಕೆಟ್‌‌‌ ನೀಡಲಾಗುವುದು. ಮೃಗಾಲಯದ ನಿರ್ವಹಣೆ ಕಾರ್ಯ ನಡೆಯುವುದರಿಂದ ಪ್ರತಿ ಸೋಮವಾರ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶವಿಲ್ಲ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.