ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಿವಾಸಿ ಕನ್ನಡಿಗರನ್ನು ಕರೆಸಿಕೊಳ್ಳಿ: ಗಣೇಶ್ ಕಾರ್ಣಿಕ್

ಮೊದಲ ಕಂತಿನಲ್ಲಿ ಕನ್ನಡಿಗರಿಲ್ಲ: ಮುಖ್ಯಮಂತ್ರಿಗೆ ಕಾರ್ಣಿಕ್ ಮನವಿ
Last Updated 6 ಮೇ 2020, 11:58 IST
ಅಕ್ಷರ ಗಾತ್ರ

ಮಂಗಳೂರು: ವಿದೇಶದಲ್ಲಿರುವ ಅನಿವಾಸಿ ಕನ್ನಡಿಗರನ್ನು ರಾಜ್ಯಕ್ಕೆ ವಾಪಸ್ ಕರೆತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ರಾಜ್ಯ ಸರ್ಕಾರದ ಅನಿವಾಸಿ ಭಾರತೀಯ ಘಟಕದ ಮಾಜಿ ಉಪಾಧ್ಯಕ್ಷರಾಗಿದ್ದ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಮನವಿ ಮಾಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ‘ಅನಿವಾಸಿ ಭಾರತೀಯರನ್ನು ತಾಯ್ನಾಡಿಗೆ ಮರಳಿ ಕರೆಸುವ ಕೇಂದ್ರ ಸರ್ಕಾರದ ಯೋಜನೆ ಮೊದಲ ಕಂತಿನಲ್ಲಿ (ಮೇ7ರಿಂದ 14) ಅನಿವಾಸಿ ಕನ್ನಡಿಗರನ್ನು ಪರಿಗಣಿಸಿಲ್ಲ. ಇದರಿಂದಾಗಿ ಸಾವಿರಾರು ಅನಿವಾಸಿ ಕನ್ನಡಿಗರು ಆತಂಕಕ್ಕೀಡಾಗಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಜೊತೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಬೇಕು’ ಎಂದು ಅವರು ವಿನಂತಿಸಿದ್ದಾರೆ.

ಲಕ್ಷಾಂತರ ಕನ್ನಡಿಗರು ಉದ್ಯೋಗಕ್ಕಾಗಿ ವಿದೇಶದಲ್ಲಿ ನೆಲೆಸಿರುತ್ತಾರೆ. ಅವರು ನಮ್ಮ ರಾಜ್ಯದ ಅರ್ಥಿಕತೆಗೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದ್ದಾರೆ. ಕೊರೊನಾ ಸೋಂಕಿನ ವ್ಯಾಪಕ ಪರಿಣಾಮದಿಂದ ಅವರು ತೊಂದರೆಯಲ್ಲಿ ಸಿಲುಕಿಕೊಂಡಿದ್ದು ಅರೋಗ್ಯ, ಉದ್ಯೋಗ, ವೀಸಾ ಅವಧಿ ಮುಕ್ತಾಯ ಮತ್ತಿತರ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಮತ್ತೆ ತಮ್ಮ ತಾಯ್ನಾಡಿಗೆ ಕರೆಯಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿರುತ್ತದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT