ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಗಳೂರು: ಕೋರ್ಟ್‌ ಕಟ್ಟಡದಿಂದ ಹಾರಿ ಆರೋಪಿ ಆತ್ಮಹತ್ಯೆ

Last Updated 31 ಆಗಸ್ಟ್ 2021, 12:56 IST
ಅಕ್ಷರ ಗಾತ್ರ

ಮಂಗಳೂರು: ಪೋಕ್ಸೊ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಿದ್ದ ಆರೋಪಿಯೊಬ್ಬ ಮಂಗಳವಾರ ಸಂಜೆ ನಗರದ ಕೋರ್ಟ್‌ ಕಟ್ಟಡದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಉಳ್ಳಾಲದ ರವಿರಾಜ್ ಆತ್ಮಹತ್ಯೆ ಮಾಡಿಕೊಂಡ ಆರೋಪಿ. ವಿಚಾರಣೆ ಮುಗಿಸಿ ಹೊರಬರುತ್ತಿದ್ದಾಗ, ತಪ್ಪಿಸಿಕೊಳ್ಳಲು ಯತ್ನಿಸಿದ ಈತ, ಮೇಲಿನಿಂದಲೇ ಕೆಳಕ್ಕೆ ಹಾರಿದ್ದಾನೆ. ಆರನೇ ಮಹಡಿಯಿಂದ ಬಿದ್ದಿದ್ದರಿಂದ ತಲೆಗೆ ಗಂಭೀರ ಗಾಯವಾಗಿತ್ತು. ರಕ್ತಸ್ರಾವವಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮೃತಪಟ್ಟಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್‌ ಎನ್.ಶಶಿಕುಮಾರ್ ಭೇಟಿ ನೀಡಿ, ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT