ಶುಕ್ರವಾರ, ಸೆಪ್ಟೆಂಬರ್ 17, 2021
29 °C

ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಶಿಕ್ಷಕ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುಬ್ರಹ್ಮಣ್ಯ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಬೆದರಿಕೆ ಒಡ್ಡಿದ್ದ ಆರೋಪದಡಿ ಇಲ್ಲಿನ ಶಿಕ್ಷಣ ಸಂಸ್ಥೆಯ ಪ್ರೌಢಶಾಲಾ ಶಿಕ್ಷಕನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಆತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ರಾಯಚೂರಿನ ಗುರುರಾಜ್ ಬಂಧಿತ ಆರೋಪಿ. ಈತ ಪ್ರಾಜೆಕ್ಟ್ ವರ್ಕ್‌ ನೆಪದಲ್ಲಿ ವಿದ್ಯಾರ್ಥಿನಿಯನ್ನು ತನ್ನ ಮನೆಗೆ ಕರೆಸಿಕೊಳ್ಳುತ್ತಿದ್ದ. ಬಾಲಕಿಯನ್ನು ಪುಸಲಾಯಿಸಿ ವಿವಸ್ತೃಗೊಳಿಸಿ ಮೊಬೈಲ್ ಮೂಲಕ ಫೋಟೋ ತೆಗೆಯುತ್ತಿದ್ದ. ಅದನ್ನು ತೋರಿಸಿ ಮನೆಯಿಂದ ಹಣ ತರುವಂತೆ ಬೆದರಿಕೆ ಹಾಕುತ್ತಿದ್ದ. ಆತನಿಗೆ ಪತ್ನಿಯೂ ಸಾಥ್ ನೀಡುತ್ತಿದ್ದಳು ಎಂದು ವಿದ್ಯಾರ್ಥಿನಿಯ ತಾಯಿ ಠಾಣೆಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು