ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಾಲ್ಲೂಕಿನ ಮೊಟೆತ್ತಡ್ಕ ನಿವಾಸಿ ಅಬ್ದುಲ್ ರಹಿಮಾನ್ಗೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಐದು ವರ್ಷ ಜೈಲು ಶಿಕ್ಷೆ ಹಾಗೂ ₹ 40 ಸಾವಿರ ದಂಡ ವಿಧಿಸಿ ಆದೇಶ ಮಾಡಿದೆ.

ಅಬ್ದುಲ ರಹಿಮಾನ್ 2016ರ ನ.18ರಂದು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಬಾಲಕಿಯು ನೀಡಿದ ಹೇಳಿಕೆ ಆಧಾರದಲ್ಲಿ ಆತನ ವಿರುದ್ಧ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ಎಸ್.ಐ ವಾಮನ ಎನ್.ಕೆ ಅವರು ಆರೋಪಿ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಒಟ್ಟು 17 ಸಾಕ್ಷಿದಾರರನ್ನು ವಿಚಾರಣೆ ನಡೆಸಲಾಗಿತ್ತು.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಕ್ಕೆ ಅಬ್ದುಲ್ ರಹಿಮಾನ್ಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಸರಿತಾ ಡಿ. ಅವರು ಪೊಕ್ಸೊ ಕಾಯ್ದೆಯ ಸೆಕ್ಷನ್ 10ರಡಿ 5 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ₹ 30ಸಾವಿರ ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದಲ್ಲಿ 6 ತಿಂಗಳ ಸಾದಾ ಕಾರಾಗೃಹ ಅನುಭವಿಸಬೇಕು ಎಂದು ಆದೇಶಿಸಿದ್ದಾರೆ.

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕೆ ಅಪರಾಧಿಗೆ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 354(ಎ) ಅಡಿ 3 ವರ್ಷ ಸಾದಾ ಶಿಕ್ಷೆ ಮತ್ತು ₹ 10 ಸಾವಿರ ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದಲ್ಲಿ ಅಪರಾಧಿಯು 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸಬೇಕು ಎಂದು ಆದೇಶ ಮಾಡಿದ್ದಾರೆ. ದಂಡದ ಮೊತ್ತದಲ್ಲಿ ₹ 30ಸಾವಿರವನ್ನು ಸಂತ್ರಸ್ತೆಗೆ ನೀಡಬೇಕು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಸಂತ್ರಸ್ತೆಗೆ ₹ 50ಸಾವಿರ ಪರಿಹಾರ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ. ಪೊಕ್ಸೊ ವಿಶೇಷ ನ್ಯಾಯಾಲಯದ ಸರ್ಕಾರಿ ವಕೀಲ ಕುದ್ರಿಯ ಪುಷ್ಪರಾಜ ಅಡ್ಯಂತಾಯ ಅವರು ಸಂತ್ರಸ್ತೆಯ ಪರವಾಗಿ ವಾದಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.