ಶುಕ್ರವಾರ, ಡಿಸೆಂಬರ್ 2, 2022
20 °C

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ– ಆರೋಪಿ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿದ ಆರೋಪದ ಮೇಲೆ ಸುಳ್ಯ ಪೊಲೀಸರು ತಾಲ್ಲೂಕಿನ ಮಿತ್ತೂರು ಉಬರಡ್ಕದ ತೀರ್ಥಪ್ರಸಾದ್ (25) ಎಂಬಾತನನ್ನು ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಬಂಧಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

ಸುಳ್ಯದ ವಿದ್ಯಾರ್ಥಿನಿಯೊಬ್ಬಳಿಗೆ ಎರಡು ತಿಂಗಳಿನಿಂದ ಆಗಾಗ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು. ಆಕೆಯನ್ನು ತಂದೆಯು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಸ್ಕ್ಯಾನಿಂಗ್‌ ಮಾಡಿಸಿಕೊಂಡು ಬರುವಂತೆ ಸೂಚಿಸಿದ್ದರು. ವಿದ್ಯಾರ್ಥಿನಿ ಗರ್ಭವತಿಯಾಗಿರುವುದು ಸ್ಕ್ಯಾನಿಂಗ್‌ನಲ್ಲಿ ಕಂಡುಬಂದಿತ್ತು. ವಾಟ್ಸ್‌ ಆಪ್‌ ಗ್ರೂಪ್‌ನಲ್ಲಿ ನಾಲ್ಕು ತಿಂಗಳ ಹಿಂದೆ ಪರಿಚಯವಾದ ತೀರ್ಥಪ್ರಸಾದ್ ಎಂಬಾತ ಜೂನ್ 30 ರಂದು ಸುಳ್ಯಕ್ಕೆ ಕೆರೆಸಿಕೊಂಡು ಆತನ ಸ್ನೇಹಿತನ ಮನೆಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದ ಎಂದು ಬಾಲಕಿ ತಿಳಿಸಿದ್ದಳು. ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ತೀರ್ಥಪ್ರಸಾದ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಾಲಕಿಯ ತಂದೆ ಸೆ. 26ರಂದು ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು