ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅತ್ಯಾಚಾರ ಪ್ರಕರಣ: ಅಪರಾಧಿಗೆ 20 ವರ್ಷ ಕಠಿಣ ಸಜೆ, ₹50 ಸಾವಿರ ದಂಡ

Published : 22 ಸೆಪ್ಟೆಂಬರ್ 2024, 6:49 IST
Last Updated : 22 ಸೆಪ್ಟೆಂಬರ್ 2024, 6:49 IST
ಫಾಲೋ ಮಾಡಿ
Comments

ಮಂಗಳೂರು: ಬೆಳ್ತಂಗಡಿ ತಾಲ್ಲೂಕು ಸವಣಾಲು ಗ್ರಾಮದ ನೇರಮೆಯ ಸದಾಶಿವ (31) ಎಂಬಾತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪ ಸಾಬೀತಾಗಿದ್ದು, ಅಪರಾಧಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ತ್ವರಿತ ಗತಿ ವಿಶೇಷ ನ್ಯಾಯಾಲಯ –2 (ಪೊಕ್ಸೊ) 20 ವರ್ಷಗಳ ಕಠಿಣ ಸಜೆ ಮತ್ತು ₹ 50 ಸಾವಿರ ದಂಡ ವಿಧಿಸಿದೆ. 

ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಕ್ಕಾಗಿ ಸದಾಶಿವನಿಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 376 (3) ಮತ್ತು ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಸೆಕ್ಷನ್ 4 (2)ರ ಅನ್ವಯ 20 ವರ್ಷ ಕಠಿಣ ಕಾರಾಗೃಹ  ಶಿಕ್ಷೆ ಮತ್ತು ₹ 50 ಸಾವಿರ ದಂಡ, ಬಾಲಕಿ ಜೊತೆ ಸಂಭೋಗ ನಡೆಸಿದ್ದಕ್ಕಾಗಿ ಐಪಿಸಿ ಸೆಕ್ಷನ್ 354 ಮತ್ತು ಪೊಕ್ಸೊ ಕಾಯ್ದೆಯ ಸಕೆನ್ಷ್‌ 8ರಡಿ 3 ವರ್ಷ ಕಠಿಣ ಶಿಕ್ಷೆ ಮತ್ತು ₹ 5 ಸಾವಿರ ದಂಡ, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67ರ ಅಡಿ 1 ವರ್ಷ ಸಾದಾ ಶಿಕ್ಷೆ ಮತ್ತು ₹ 5 ಸಾವಿರ ದಂಡ ವಿಧಿಸಿ ಜಿಲ್ಲಾ ನ್ಯಾಯಾಧೀಶರಾದ ಮಾನು ಕೆ. ಎಸ್. ತೀರ್ಪು ನೀಡಿದ್ದಾರೆ.

‘ದಂಡದ ಮೊತ್ತ ₹ 50 ಸಾವಿರವನ್ನು ಸಂತ್ರಸ್ತ ಬಾಲಕಿಗೆ ಪಾವತಿಸಬೇಕು. ಸಂತ್ರಸ್ತರ ಪರಿಹಾರ ಯೋಜನೆ ಅಡಿ ಸಂತ್ರಸ್ತ ಬಾಲಕಿಗೆ ಹೆಚ್ಚುವರಿಯಾಗಿ ₹ 1.50 ಲಕ್ಷ ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನೀಡಬೇಕು’ ಎಂದು ಅವರು ತೀರ್ಪಿನಲ್ಲಿ ನಿರ್ದೇಶನ ನೀಡಿದ್ದಾರೆ.  

’ಬಾಲಕಿಯ ತಾಯಿಯ ಮೊಬೈಲ್‌ಗೆ ಕರೆ ಮಾಡುತ್ತಿದ್ದ ಸದಾಶಿವ, ಬಾಲಕಿ ಜೊತೆ ಮಾತನಾಡುತ್ತಿದ್ದ. ಬಳಿಕ  ಫೇಸ್ ಬುಕ್‌ನಲ್ಲಿ ಸಂಪರ್ಕವಿಟ್ಟುಕೊಂಡಿದ್ದ. 2022ರ ಆ. .9ರಂದು ಬೆಳಿಗ್ಗೆ 10ಕ್ಕೆ ಆಕೆಯ ಮನೆಗೆ ಬಂದಿದ್ದ ಆತ ಆಕೆಯ ಮೇಲೆ ಬಲಾತ್ಕಾರ ಮಾಡಿದ್ದ. ‘ನೀನು ಹೆದರಬೇಡ ನಿನ್ನನ್ನು ಮದುವೆಯಾಗುತ್ತೇನೆ’ ಎಂದು ಬಾಲಕಿಯನ್ನು ನಂಬಿಸಿದ್ದ.  ಅಲ್ಲಿಂದ ತೆರಳಿದ ಬಳಿಕವೂ ಬಾಲಕಿಗೆ ಫೇಸ್‌ಬುಕ್‌ನಲ್ಲಿ ಅಶ್ಲೀಲ ಸಂದೇಶ  ರವಾನಿಸಿದ್ದ.  ಘಟನೆ ನಡೆದ ಮರುದಿನ ಬಾಲಕಿಯ ಫೇಸ್‌ಬುಕ್‌ಗೆ, ‘ನಿನ್ನೆ ನಾನು ನಿನ್ನನ್ನು ಟಚ್ ಮಾಡಿ ದೊಡ್ಡ ತಪ್ಪು ಮಾಡಿ ಬಿಟ್ಟೆ, ದಯವಿಟ್ಟು ಕ್ಷಮಿಸು, ಇನ್ನು ಮುಂದೆ ಯಾವತ್ತು ಟಚ್ ಮಾಡಲ್ಲ. ನೀನು ಯಾವಾಗಲೂ ಸಂತೋಷವಾಗಿರು. ನಾನು ಇನ್ನು ಮುಂದೆ ನಿನಗೆ ತೊಂದರೆ ಕೊಡಲ್ಲ. ನನ್ನಷ್ಟಕ್ಕೆ ನಾನಿರುವೆ’ ಎಂದು ಸಂದೇಶವನ್ನು ಕಳುಹಿಸಿದ್ದ.  ಇದರಿಂದ ನೊಂದ ಬಾಲಕಿಯು ಡಿಸೇಲ್ ಸೇವವಿಸಿದ್ದಳು. ಬೆಳ್ತಂಗಡಿ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದು, ಐಪಿಸಿ  ಸೆಕ್ಷನ್‌  354, 376, ಪೋಕ್ಸೊ ಕಾಯ್ದೆಯ ಸೆಕ್ಷನ್‌ 4 ಮತ್ತು 8 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌  67ರ ಅಡಿ ಮೊಕದ್ದಮೆ ದಾಖಲಾಗಿತ್ತು.  ಪ್ರಕರಣ ಸಂಬಂಧ ಸರ್ಕಲ್ ಇನ್‌ಸ್ಪೆಕ್ಟರ್ ಶಿವಕುಮಾರ್ ಬಿ. ಅವರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ 14 ಸಾಕ್ಷಿದಾರರನ್ನು ವಿಚಾರಿಸಲಾಗಿತ್ತು. 33 ದಾಖಲೆಗಳನ್ನು ಗುರುತಿಸಲಾಗಿತ್ತು’ ಎಂದು ಸರ್ಕಾರದ ಪರವಾಗಿ ವಾದಿಸಿದ್ದ ವಿಶೇಷ ವಕೀಲ ಕೆ.ಬದರಿನಾಥ ನಾಯರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT