ಮಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು 20 ವರ್ಷಗಳ ಕಠಿಣ ಸಜೆ ಹಾಗೂ ₹45 ಸಾವಿರ ದಂಡ ವಿಧಿಸಿ ಆದೇಶಿಸಿದೆ.

ಅಬೂಬಕರ್ (53) ಎಂಬಾತ ಶಿಕ್ಷೆಗೆ ಒಳಗಾದ ಅಪರಾಧಿ. ಈತನು 205ರ ಮಾರ್ಚ್ 29ರಂದು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್ಪೆಕ್ಟರ್ ಶಿವಕುಮಾರ್ ಬಿ. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಮಾನು ಕೆ.ಎಸ್ ಅವರು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸಂತ್ರಸ್ತೆಗೆ ದಂಡದ ಮೊತ್ತ ₹50 ಸಾವಿರ ಹಾಗೂ ಪ್ರತ್ಯೇಕವಾಗಿ ₹3.50 ಲಕ್ಷ ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಸರ್ಕಾರದ ಪರವಾಗಿ ಪೊಕ್ಸೊ ವಿಶೇಷ ಸರ್ಕಾರಿ ವಕೀಲೆ ಸಹನಾದೇವಿ ಬೋಳೂರು ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.