ಗುರುವಾರ , ಸೆಪ್ಟೆಂಬರ್ 29, 2022
26 °C

ಮಗಳ ಮೇಲೆ ಅತ್ಯಾ‌ಚಾರ– ತಂದೆಗೆ 15 ವರ್ಷ ಸಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಪ್ರಕರಣದ ಆರೋಪಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ಶೀಘ್ರಪಥ -2) ನ್ಯಾಯಾಲಯದ ನ್ಯಾಯಾಧೀಶರಾದ ಕೆ. ಎಂ. ರಾಧಾಕೃಷ್ಣ ಅವರು 15ವರ್ಷ ಕಠಿಣ ಸಜೆ ಹಾಗೂ ₹ 25 ಸಾವಿರ ದಂಡ ವಿಧಿಸಿದ್ದಾರೆ.

55 ವರ್ಷದ ಅಪರಾಧಿಯು ಮೆಲ್ಕಾರ್‌ ಹಾಗೂ ಇರಾ ಗ್ರಾಮದಲ್ಲಿ 2018 ರ ಜನವರಿಯಲ್ಲಿ ಅಪ್ರಾಪ್ತ ಮಗಳ ಮೇಕೆ ಅತ್ಯಾಚಾರ ನಡೆಸಿದ್ದರು. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು.  ವೃತ್ತ ನಿರೀಕ್ಷಕರಾಗಿದ್ದ ಶರಣಗೌಡ ಹಾಗೂ ಟಿ. ಡಿ. ನಾಗರಾಜ್  ಅವರು ಈ ಪ್ರಕರಣ ತನಿಖೆ ನಡೆಸಿದ್ದರು. ಸರ್ಕಾರಿ ವಕೀಲ ವೆಂಕಟರಮಣ ಸ್ವಾಮಿ  ಅವರು ಸರ್ಕಾರದ ಪರವಾಗಿ ವಾದಿಸಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು