ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿ ಬಂಧನ

Published 1 ಜನವರಿ 2024, 23:31 IST
Last Updated 1 ಜನವರಿ 2024, 23:31 IST
ಅಕ್ಷರ ಗಾತ್ರ

ಮಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಪರಿಶಿಷ್ಟ ಜಾತಿಯ 17 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಉಳ್ಳಾಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಅಣಜೂರು ಗ್ರಾಮದ ಮೊಹಮ್ಮದ್ ರಝೀನ್ (25) ಬಂಧಿತ ಆರೋಪಿ. ಆರೋಪಿ ವಿರುದ್ಧ ಬಾಲಕಿ ದೂರು ನೀಡಿದ್ದಳು.

‘ಬಾಲಕಿಯನ್ನು ಪ್ರೀತಿಸುವುದಾಗಿ ಹೇಳಿದ್ದ ಆರೋಪಿಯು ನಾಲ್ಕು ತಿಂಗಳ ಹಿಂದೆ ನಗರದ ಪಂಪ್‌ವೆಲ್‌ಗೆ ಆಕೆಯನ್ನು ಬಸ್‌ನಲ್ಲಿ ಕರೆದುಕೊಂಡು ಬಂದಿದ್ದ. ನಂತರ ಆತನ ಆಟೊರಿಕ್ಷಾದಲ್ಲಿ ಆಕೆಯನ್ನು ಕುಂಪಲದ ಬಾಡಿಗೆ ಮನೆಗೆ ಕರೆದುಕೊಂಡು ಹೋಗಿದ್ದ. ಮದುವೆಯಾಗುವುದಾಗಿ ನಂಬಿಸಿ ಒತ್ತಾಯಪೂರ್ವಕವಾಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಬಾಲಕಿಯು ನೀಡಿದ ದೂರಿನ ಆಧಾರದಲ್ಲಿ ಆರೋಪಿ ವಿರುದ್ಧ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಭಾನುವಾರ ಬಂಧಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT