ಬಂಟ್ವಾಳ: ಜಿಲ್ಲೆಯ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಭಕ್ತರಿಗೆ ನಿರ್ದಿಷ್ಟ ವಸ್ತ್ರಸಂಹಿತೆ ಜಾರಿಗೊಳಿಸಬೇಕು. ಜತೆಗೆ ದೇವಳದ ವತಿಯಿಂದ ಸುಸಜ್ಜಿತ ಗೋಶಾಲೆ ಆರಂಭಿಸಬೇಕು ಎಂದು ಆಗ್ರಹಿಸಿ ಬಂಟ್ವಾಳ ಪ್ರಖಂಡ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ಸಂಘಟನೆ ವತಿಯಿಂದ ಏಪ್ರಿಲ್5ರಂದು ಬೆಳಿಗ್ಗೆ 5.30ಕ್ಕೆ ಪಾದಯಾತ್ರೆ ಆಯೋಜಿಸಲಾಗಿದೆ ಎಂದು ವಕೀಲ ಪ್ರಸಾದ್ ಕುಮಾರ್ ರೈ ತಿಳಿಸಿದರು.

ಅಂದು ಪೊಳಲಿ ಕ್ಷೇತ್ರಕ್ಕೆ ಸುಮಾರು 5 ಸಾವಿರಕ್ಕೂ ಅಧಿಕ ಮಂದಿಯೊಂದಿಗೆ ‘ಅಮ್ಮನೆಡೆಗೆ ನಮ್ಮ ನಡಿಗೆ' ಪಾದಯಾತ್ರೆ' ಕೈಗೊಳ್ಳಲಾಗಿದೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಧಾರ್ಮಿಕ ದತ್ತಿ ಕಾಯ್ದೆ ಪ್ರಕಾರ ದೇವಳದ ವತಿಯಿಂದ ಧರ್ಮ ಶಿಕ್ಷಣ ಮತ್ತು ಸಂಸ್ಕಾರ ನೀಡುವುದರ ಜತೆಗೆ ಉಚಿತ ಸಾಮೂಹಿಕ ವಿವಾಹ, ರಾತ್ರಿ ಭೋಜನ ವ್ಯವಸ್ಥೆ, ಪಾರದರ್ಶಕ ಲೆಕ್ಕಾಚಾರ, ದೇವಳದ ಪಾವಿತ್ರ್ಯಕ್ಕೆ ಧಕ್ಕೆಯಾಗದಂತೆ ಜಾತ್ರೆಯಲ್ಲಿ ಧರ್ಮ ನಿಷ್ಠರಿಗೆ ಮಾತ್ರ ವ್ಯಾಪಾರಕ್ಕೆ ಅನುಕೂಲ ಮಾಡಿ ಕೊಡಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಲಾಗುವುದು. ದೇವಸ್ಥಾನ ಮತ್ತು ದೈವಸ್ಥಾನಗಳಲ್ಲಿ ಪಾರಂಪರಿಕವಾಗಿ ಬಂದಿರುವ ಕೋಳಿ ಕುಂಟ ಮತ್ತು ಜೂಜು ರಹಿತ ಕೋಳಿ ಅಂಕಗಳಿಗೆ ಪೊಲೀಸ್ ಇಲಾಖೆ ಅಡ್ಡಿಪಡಿಸಬಾರದು ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ರೋಹಿತ್ ಪಣೋಲಿಬೈಲು, ದೀಪಕ್ ಅಜೆಕಲ, ಸಂತೋಷ್ ಸರಪಾಡಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-29-1901681553

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.