ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವವಕೀಲಗೆ ಪೊಲೀಸ್‌ ದೌರ್ಜನ್ಯ– ಆರೋಪ

ವಕೀಲರ ಸಂಘ ಖಂಡನೆ
Last Updated 6 ಡಿಸೆಂಬರ್ 2022, 6:04 IST
ಅಕ್ಷರ ಗಾತ್ರ

ಮಂಗಳೂರು: ಯುವ ವಕೀಲ ಕುಲದೀಪ್ ಶೆಟ್ಟಿ ಮೇಲೆ ಬಂಟ್ವಾಳ ತಾಲ್ಲೂಕಿನ ಪುಂಜಾಲಕಟ್ಟೆ ಠಾಣೆಯ ಪೋಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಮಂಗಳೂರು ವಕೀಲರ ಸಂಘ ಆರೋಪಿಸಿದೆ.

ಸಂಘದ ಕಾರ್ಯಕಾರಿ ಸಮಿತಿಯು ಸೋಮವಾರ ತುರ್ತು ಸಭೆ ನಡೆಸಿ, ಈ ಘಟನೆಯನ್ನು ಖಂಡಿಸಿ ನಿರ್ಣಯ ಕೈಗೊಂಡಿದೆ.

ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿರುವ ಸಿವಿಲ್ ವ್ಯಾಜ್ಯವೊಂದರಲ್ಲಿ ಪ್ರತಿವಾದಿ ವಿರುದ್ಧ ಪ್ರತಿಬಂಧಕಾಜ್ಞೆ ಇದ್ದರೂ ಯುವ ವಕೀಲ ಕುಲದೀಪ್‌ ಶೆಟ್ಟಿ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ರಾತ್ರಿ ವೇಳೆ ಮನೆಗೆ ಪ್ರವೇಶ ಮಾಡಿ ಅವರನ್ನು ಎಳೆದುಕೊಂಡು ಹೋಗುವ ಮೂಲಕ ಪೊಲೀಸರು ದೌರ್ಜನ್ಯ ನಡೆಸಿದ್ದು, ಇದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀಧರ ಎಣ್ಮಕಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಲೀಸರ ದೌರ್ಜನ್ಯವನ್ನು ತನಿಖೆ ಮಾಡಿ ವರದಿ ಕೊಡುವಂತೆ ಬಂಟ್ವಾಳದ ನ್ಯಾಯಾಲಯ ಹಿರಿಯ ಪೊಲೀಸ್ ಅಧಿಕಾರಿಗೆ ನಿರ್ದೇಶನ ನೀಡಿದೆ. ತಪ್ಪಿತಸ್ಥ ಪೋಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂಘವು ಹಿರಿಯ ಪೊಲೀಸ್ ಅಧಿಕಾರಿಯವರನ್ನು ಮತ್ತು ಸರ್ಕಾರವನ್ನು ಒತ್ತಾಯಿಸಿದೆ. ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದೂ ಎಚ್ಚರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT