ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರ್ಮಿಕ ಅವಹೇಳನ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ

Last Updated 14 ಆಗಸ್ಟ್ 2020, 4:26 IST
ಅಕ್ಷರ ಗಾತ್ರ

ಮಂಗಳೂರು: ಸಾಮಾಜಿಕ ಜಾಲತಾಣದ ಮೂಲಕ ಧಾರ್ಮಿಕ ಅವಹೇಳನ ಹಾಗೂ ಸಾಮಾಜಿಕ ಸ್ವಾಸ್ಥ್ಯ ಕದಡುವಂತಹ ಯಾವುದೇ ವಿಚಾರಗಳ ಕುರಿತು ಪೋಸ್ಟ್, ಶೇರ್ ಹಾಗೂ ಕಮೆಂಟ್ ಮಾಡುವುದು ಕಂಡುಬಂದರೆ ಅಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಶ್‌ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತ ವಿಚಾರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಈಗಾಗಲೇ ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದ್ದು, ಈ ಕುರಿತು ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದ್ದಾರೆ.

ಯಾವುದೇ ಮತ, ಧಾರ್ಮಿಕ ವಿಚಾರಗಳಿಗೆ ಸಂಬಂಧಪಟ್ಟಂತೆ ಯಾವುದೇ ವ್ಯಕ್ತಿಗಳು ಧಾರ್ಮಿಕ ಅವಹೇಳನ ಮಾಡುವ ವಿಚಾರಗಳನ್ನು ಸೃಷ್ಟಿಸುವುದಾಗಲಿ, ಹಂಚಿಕೊಳ್ಳುವುದಾಗಲಿ ಹಾಗೂ ಅಭಿಪ್ರಾಯ ವ್ಯಕ್ತಪಡಿಸುವುದಾಗಲಿ ಹಾಗೂ ಟೀಕೆ ಮಾಡುವುದಾಗಲಿ ಕಂಡು ಬಂದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಗಲಭೆಯ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶವಾಗಿರುವ ನಗರದಾದ್ಯಂತ ಮಂಗಳೂರು ನಗರ ಪೊಲೀಸ್ ಹಾಗೂ ಕ್ಷಿಪ್ರ ಕಾರ್ಯಪಡೆ(ಆರ್‌ಎಎಫ್) ತುಕಡಿ ಜಂಟಿಯಾಗಿ ಪಥಸಂಚಲನ ನಡೆಸಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT