ಮಂಗಳವಾರ, ಮಾರ್ಚ್ 9, 2021
28 °C

ಅನುಮತಿ ಇಲ್ಲದೇ ಡ್ರೋನ್ ಬಳಸಿದರೆ ಕ್ರಮ: ಪೊಲೀಸ್‌ ಕಮಿಷನರ್‌ ಶಶಿಕುಮಾರ್ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರದಲ್ಲಿ ಅವ್ಯಾಹತವಾಗಿ ಡ್ರೋನ್‍ಗಳನ್ನು ಬಳಕೆ ಮಾಡುತ್ತಿರುವುದು ಕಂಡು ಬಂದಿದೆ.  ಯಾವುದೇ ಖಾಸಗಿ ಕಾರ್ಯಕ್ರಮಗಳಲ್ಲಿ ಡಿಜಿಸಿಎ ನಿಯಮ ಉಲ್ಲಂಸಿ ಡ್ರೋನ್ ಬಳಸಿದರೆ, ವಶಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು  ಪೊಲೀಸ್‌ ಕಮಿಷನರ್‌ ಎನ್. ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಡ್ರೋಣ್ ಬಳಸುವವರು ಅಥವಾ ಡ್ರೋನ್ ಹೊಂದಿರುವವರು ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯ ಎಂದು ಅವರು ತಿಳಿಸಿದರು.

ಬಸ್ಸಿನಲ್ಲಿ ಯುವತಿಗೆ ಕಿರುಕುಳ ಪ್ರಕರಣ: ತನಿಖೆ ಮುಂದುವರಿಕೆ
ಬಸ್ಸಿನಲ್ಲಿ ಯುವತಿಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ತಂಡಗಳ ಮೂಲಕ ತನಿಖೆ ನಡೆಯುತ್ತಿದೆ. ಈವರೆಗೂ ಆರೋಪಿಯ ಸುಳಿವು ದೊರಕಿಲ್ಲ. ಆತ ಮಲಯಾಳಂ ಮಾತನಾಡುತ್ತಿದ್ದ ಕಾರಣ ಕೇರಳ ಮೂಲದವ ಆಗಿರಬಹುದು ಎಂದು ಶಂಕಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು