ಬುಧವಾರ, ಜೂನ್ 29, 2022
24 °C
ರಸ್ತೆಗೆ ಇಳಿದ ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್

ಅನಗತ್ಯ ವಾಹನ ಓಡಾಟಕ್ಕೆ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪುತ್ತೂರು: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಜಿಲ್ಲೆಯಲ್ಲಿ ಮಾರ್ಗಸೂಚಿ ಬಿಗಿಗೊಳಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಪುತ್ತೂರು ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಅವರು ಮಂಗಳವಾರ ಪುತ್ತೂರು ನಗರದಲ್ಲಿ ರಸ್ತೆಗಿಳಿದು ಅನಗತ್ಯ ವಾಹನ ಸಂಚಾರಕ್ಕೆ ಕಡಿವಾಣ ಹಾಕಿದರು.

ಮಾಣಿ– ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಪೊಲೀಸ್ ತಪಾಸಣಾ ಕೇಂದ್ರದ ಬಳಿ ಸಂಚರಿಸುತ್ತಿದ್ದ ವಾಹನ ಗಳ ತಪಾಸಣೆ ಅವರು ನಡೆಸಿದರು. ಬೆಳಿಗ್ಗೆ 10 ಗಂಟೆಯಿಂದ 11 ಗಂಟೆಯ ತನಕ ವಾಹನ ತಪಾಸಣೆ ನಡೆಸಿದ ಅವರು ಸರಿಯಾದ ಮಾಹಿತಿ ದಾಖಲೆ ಪತ್ರ ನೀಡಿದವರಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಿ, ಉಳಿದ ವಾಹನಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಬಿಸಿ ಮುಟ್ಟಿಸಿದರು.

‘ಲಾಕ್‌ಡೌನ್ ನಿಯಮದನ್ವಯ ಅನಗತ್ಯ ವಾಹನ ಸಂಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮುಂದಿನ ಒಂದು ವಾರ ನಿರಂತರ ವಾಹನ ತಪಾಸಣೆ ನಡೆಯಲಿದೆ. ಪುತ್ತೂರು ಉಪವಿಭಾಗ ವ್ಯಾಪ್ತಿಯ ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ಭಾಗದಲ್ಲಿ ದಾಖಲೆ ರಹಿತ ಅನಗತ್ಯ ವಾಹನ ಸಂಚಾರಕ್ಕೆ ದಂಡ ವಿಧಿಸಿ, ವಾಹನ ವಶಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ’ ಎಂದು ಡಾ.ಯತೀಶ್ ಉಳ್ಳಾಲ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು