ಸೋಮವಾರ, ಜೂನ್ 21, 2021
29 °C

ಕಾರು ಕೆಟ್ಟು ಗರ್ಭಿಣಿ ಪರದಾಟ; ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಪೊಲೀಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಮಾರ್ಗಮಧ್ಯೆ ಕಾರು ಕೆಟ್ಟುಹೋಗಿ ಪರದಾಡುತ್ತಿದ್ದ ಗರ್ಭಿಣಿಯೊಬ್ಬರನ್ನು ಪೊಲೀಸ್ ಇಲಾಖೆ ವಾಹನದಲ್ಲಿ ಆಸ್ಪತ್ರೆಗೆ ತಲುಪಿಸುವ ಮೂಲಕ ಎಎಸ್ಐ ಹರೀಶ್ ಮತ್ತು ವಿಜಯ್‌ಕುಮಾರ್ ವಿ. ಮಾನವೀಯತೆ ಮೆರೆದಿದ್ದಾರೆ.

ಮಹಿಳೆಯು ಹೆರಿಗೆಗೆಂದು ವಿಟ್ಲದಿಂದ ಮಂಗಳೂರಿಗೆ ಹೋಗುತ್ತಿದ್ದ ವೇಳೆ, ಆರ್ಕುಳ ಪೊಲೀಸ್ ಚೆಕ್ ಪೋಸ್ಟ್ ಬಳಿ ಅವರ ಕಾರು ಕೆಟ್ಟು ಹೋಗಿತ್ತು. ಈ ವೇಳೆ ಸ್ಥಳಕ್ಕೆ ಬಂದ ಎಎಸ್ಐ ಹರೀಶ್ ಮತ್ತು ವಿಜಯ್‌ಕುಮಾರ್ ವಿ. ಅವರು ತಮ್ಮ ಇಲಾಖೆ ವಾಹನದಲ್ಲಿಯೇ ಗರ್ಭಿಣಿಯನ್ನು ಆಸ್ಪತ್ರೆಗೆ ತಲುಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಿಳೆಯ ಪತಿ ಸಿದ್ದಿಕ್ ಅವರು, ಸುಸೂತ್ರ ಹೆರಿಗೆಯಾಗಿದ್ದು, ಗಂಡು ಮಗು ಜನಿಸಿದೆ. ತಾಯಿ, ಮಗು ಆರೋಗ್ಯವಾಗಿದ್ದಾರೆ. ಪೊಲೀಸರು ನೀಡಿದ ನೆರವನ್ನು ಮರೆಯಲು ಸಾಧ್ಯವಿಲ್ಲ. ಸಕಾಲಕ್ಕೆ ಆಸ್ಪತ್ರೆಗೆ ತಲುಪಿಸಿದ್ದರಿಂದ ಸುಸೂತ್ರ ಹೆರಿಗೆಯಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಇವರ ಈ ಮಾನವೀಯ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಹರೀಶ್ ಅವರು ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಎಎಸ್ಐ ಮತ್ತು ವಿಜಯ್ ಕುಮಾರ್ ಅವರು ಕಾನ್ ಸ್ಟೆಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು