ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ನಿಷೇಧಾಜ್ಞೆಯಿಂದ ವಿನಾಯಿತಿ

Last Updated 8 ಆಗಸ್ಟ್ 2022, 16:33 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆ. 14ರ ಮಧ್ಯ ರಾತ್ರಿವರೆಗೆ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್‌ 144ರಡಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ, ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮಗಳಿಗೆ ಈ ನಿಬಂಧನೆಯನ್ನು ಜಿಲ್ಲಾಡಳಿತ ಸಡಿಲಿಸಿದೆ.

‘ನಿಷೇಧಾಜ್ಞೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಾರ್ವಜನಿಕರು, ಸಂಘಟನೆಗಳು ಅಥವಾ ರಾಜಕೀಯ ಪಕ್ಷಗಳು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಬಹುದು’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಏರ್ಪಡಿಸುವವರು ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಅನುಮತಿ ಪಡೆಯಬಹುದು.

‘ಮಂಗಳೂರು ಕಮಿಷನರೇಟ್‌ ವ್ಯಾಪ್ತಿಯಲ್ಲಿಯೂ ಸಿಆರ್‌ಪಿಸಿ ಸೆಕ್ಷನ್‌ 144ರ ಅಡಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಬಹುದು’ ಎಂದು ನಗರ ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ್‌ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT