ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ. ಕನ್ನಡ | ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ: ವಸ್ತ್ರಸಂಹಿತೆ ಪಾಲನೆಗೆ ಸೂಚನೆ

Published 24 ಜನವರಿ 2024, 6:29 IST
Last Updated 24 ಜನವರಿ 2024, 6:29 IST
ಅಕ್ಷರ ಗಾತ್ರ

ಮಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ 3,064 ಹುದ್ದೆಗಳ ನೇಮಕಾತಿಗಾಗಿ ಜ.28ರಂದು ಬೆಳಿಗ್ಗೆ 11ರಿಂದ 12.30ರವರೆಗೆ ಲಿಖಿತ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ಉಜಿರೆಯಲ್ಲಿ ಆರು ಕೇಂದ್ರಗಳಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಲಾಗಿದೆ.

ಅರ್ಹ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಎಸ್‍ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತದೆ ಹಾಗೂ ಕರೆಪತ್ರದ ಲಿಂಕ್ ಸಹ ಕಳುಹಿಸಲಾಗುತ್ತದೆ. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‍ಲೋಡ್ ಮಾಡಿ, ಅದರಲ್ಲಿ ನಮೂದಿಸಿರುವ ಸೂಚನೆ ಪ್ರಕಾರ ಲಿಖಿತ ಪರೀಕ್ಷೆಗೆ ಹಾಕರಾಗಬೇಕು.

ಉಜಿರೆಯ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು, ಮಂಜುನಾಥೇಶ್ವರ ಪದವಿ ಕಾಲೇಜು, ಮಂಜುನಾಥೇಶ್ವರ ಪಿ.ಯು ಕಾಲೇಜು, ಮಂಜುನಾಥೇಶ್ವರ ಐ.ಟಿ ಕಾಲೇಜು, ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು, ಮಂಜುನಾಥೇಶ್ವರ ಸಿಬಿಎಸ್‍ಬಿ ಸ್ಕೂಲ್‌ಗಳಲ್ಲಿ ಪರೀಕ್ಷೆ ನಡೆಯಲಿದೆ.

ವಸ್ತ್ರಸಂಹಿತೆ: ಪುರುಷ ಮತ್ತು ತೃತೀಯಲಿಂಗಿ ಅಭ್ಯರ್ಥಿಗಳು ಅರ್ಧ ತೊಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸಬಾರದು. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸಬಾರದು, ಪರೀಕ್ಷಾ ಕೇಂದ್ರದೊಳಗೆ ಶೂಗಳನ್ನು ನಿರ್ಬಂಧಿಸಲಾಗಿದೆ. ಅಭ್ಯರ್ಥಿಗಳು ತೆಳುವಾದ ಅಡಿಭಾಗ ಇರುವ ಪಾದರಕ್ಷೆಗಳನ್ನು ಧರಿಸಬೇಕು, ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT