ಬುಧವಾರ, ಜನವರಿ 29, 2020
30 °C

ಉಪಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಅಸ್ಥಿರತೆ ಕೊನೆ : ಸಿ.ಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Yediyurappa In Dharmastala

ಉಜಿರೆ: ಉಪಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಅಸ್ಥಿರತೆ ಕೊನೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಇಲ್ಲಿನ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ₹347 ಕೋಟಿ ಕಾಮಗಾರಿಗೆ ಭಾನುವಾರ  ಚಾಲನೆ ನೀಡಿ ಅವರು ಮಾತನಾಡಿದರು.

ಉಪಚುನಾವಣೆಯಲ್ಲಿ ಬಿಜೆಪಿ‌ ಕನಿಷ್ಠ 13 ಸ್ಥಾನಗಳಲ್ಲಿ ಜಯಗಳಿಸಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನದಲ್ಲಿ ಗೆಲ್ಲಬಹುದು. ಮುಂದಿನ ಮೂರೂವರೆ ವರ್ಷ ಬಿಜೆಪಿ ಸರ್ಕಾರ ರಾಜ್ಯದ ಸರ್ವಾಂಗೀಣ ಅಭಿವೃದ್ದಿಗಾಗಿ ಕೆಲಸ ಮಾಡಲಿದೆ ಎಂದರು.

ನಮ್ಮ ಶಾಸಕರ ಬೇಡಿಕೆಯನ್ನು ಈಡೇರಿಸುವ ಮೂಲಕ ರಾಜ್ಯವನ್ನು ಮಾದರಿಯಾಗಿ ಅಭಿವೃದ್ಧಿ ಮಾಡಲಾಗುವುದು. ಸ್ವಚ್ಛ, ದಕ್ಷ , ಪ್ರಾಮಾಣಿಕ ಆಡಳಿತ ನೀಡುತ್ತವೆ ಎಂದರು.

ಎಂಡೋಸಲ್ಫಾನ್ ಪೀಡಿತರಿಗೆ ಎಂಡೋಪಾಲನಾ ಕೇಂದ್ರ ತೆರೆಯಲಾಗುವುದು. ಈ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ವಿಶೇಷ ಕಾಳಜಿ ವಹಿಸಿ, ಒತ್ತು ನೀಡಿದ್ದರು ಎಂದು ನೆನಪಿಸಿಕೊಂಡರು. ಬೆಳ್ತಂಗಡಿ ತಾಲ್ಲೂಕಿನ ಕಣಿಯೂರನ್ನು ಹೊಸ ಹೋಬಳಿಯಾಗಿ ಘೋಷಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ರಾಜ್ಯ ಪೊಲೀಸ್ ಇಲಾಖೆಯನ್ನು ದೇಶದಲ್ಲಿ  ನಂಬರ್ 1  ಮಾಡಲಾಗುವುದು. ಮಹಿಳೆಯರ ರಕ್ಷಣೆ ನಮ್ಮ ಇಲಾಖೆಯ ಮೊದಲ ಆದ್ಯತೆಯಾಗಿದೆ ಎಂದು ಹೇಳಿದರು.

ಸಂಕಷ್ಟದಲ್ಲಿರುವವರಿಗೆ ನೆರವು ನೀಡುವುದೇ ನಮ್ಮ ಇಲಾಖೆಯ ಉದ್ದೇಶ ಎಂದರು. ಉಪ ಮುಖ್ಯ ಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ಬೆಳ್ತಂಗಡಿ ವಿಧಾನಸಭಾ ವ್ಯಾಪ್ತಿಯಲ್ಲಿನ ರಸ್ತೆಗಳ ಅಭಿವೃದ್ಧಿಗಾಗಿ ₹101 ಕೋಟಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರು ಮಾಡಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,   ಶಾಸಕರಾದ ಹರೀಶ್ ಪೂಂಜ, ಸಂಜೀವ ಮಠಂದೂರು, ಡಾ.ವೈ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಾಲ್  ಸರ್, ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕ ಅರುಣ್ ಚಕ್ರವರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷೀ ಪ್ರಸಾದ್, ಜಿಲ್ಲಾ ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಆರ್. ಸೆಲ್ವಮಣಿ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು