ಮಂಗಳವಾರ, ಜನವರಿ 19, 2021
27 °C

‌ಪಾಕ್‌ ಪರ ಘೋಷಣೆ | ಕಾಂಗ್ರೆಸ್‌ನಿಂದ ಗೊಂದಲ ಮರೆಮಾಚಲು ಯತ್ನ: ಶೋಭಾ ಆರೋಪ

ಪಿಟಿಐ Updated:

ಅಕ್ಷರ ಗಾತ್ರ : | |

ಮಂಗಳೂರು: ಕೇಂದ್ರ ಮತ್ತು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರತಿಕ್ರಿಯಿಸಲು ಕಾಂಗ್ರೆಸ್‌ ನಾಯಕರ ಬಳಿ ಉತ್ತರವಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರ್ಯವೈಖರಿ ಬಗ್ಗೆ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ನಾಯಕತ್ವದ ಬಗ್ಗೆ ಗೊಂದಲ ಮೂಡಿರುವುದು ಸ್ವಷ್ಟವಾಗಿದೆ’ ಎಂದು ಹೇಳಿದರು.

ಇತ್ತೀಚೆಗೆ ಉಜಿರೆನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದ ಡಿ.ಕೆ.ಶಿವಕುಮಾರ್‌, ಘಟನೆ ಹಿಂದೆ ಬಿಜೆಪಿ ಕಾರ್ಯಕರ್ತ ಪಾತ್ರ ಇರಬಹುದು. ಆದರೆ, ಕಾಂಗ್ರೆಸ್‌ ಕಾರ್ಯಕರ್ತರು ಎಂದಿಗೂ ಇಂತಹ ಕೃತ್ಯಗಳಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದರು.

ಡಿಕೆಶಿ ಹೇಳಿಕೆ ಕುರಿತು ತಿರುಗೇಟು ನೀಡಿದ ಶೋಭಾ, ‘ಡಿ.ಕೆ.ಶಿವಕುಮಾರ್‌ ಸುಳ್ಳು ಆರೋಪ ಮಾಡಿದ್ದಾರೆ. ಪೊಲೀಸರು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.

ಡಿ.30ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಉಜಿರೆ ಮತ ಎಣಿಕೆ ಕೇಂದ್ರದ ಹೊರಗಡೆ ಮತ ಎಣಿಕೆ ಸಂದರ್ಭದಲ್ಲಿ ಎಸ್‌ಡಿಪಿಐ ಕಾರ್ಯಕರ್ತರು 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಹಾಕುತ್ತಿರುವ ವಿಡಿಯೊ ವೈರಲ್ ಆಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು