ಬಂಟ್ವಾಳ: ಇಲ್ಲಿನ ಸಿದ್ಧಕಟ್ಟೆ ಸಮೀಪದ ಪೂಂಜ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಏ.2ರಿಂದ 6ರವರೆಗೆ ವಾರ್ಷಿಕ ಜಾತ್ರೆ ಮತ್ತು ರಥೋತ್ಸವ ಹಾಗೂ ಚಂಡಿಕಾಯಾಗ ನಡೆಯಲಿದೆ. ಏ.1ರಂದು ಸಂಜೆ 4 ಗಂಟೆಗೆ ಸಿದ್ಧಕಟ್ಟೆಯಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದ್ದು, ಕ್ಷೇತ್ರದ ತಂತ್ರಿ ಬಾಲಕೃಷ್ಣ ಪಾಂಗಣ್ಣಾಯ ಮಾರ್ಗದರ್ಶನದಲ್ಲಿ ಪಿ.ಕೃಷ್ಣಪ್ರಸಾದ್ ಅಸ್ರಣ್ಣ ಮತ್ತು ಪಿ.ಪ್ರಕಾಶ್ ಆಚಾರ್ಯ ಉಪಸ್ಥಿತಿಯಲ್ಲಿ ದೇವರ ಬಲಿ ಉತ್ಸವ, ಚೆಂಡು, ಚಂಡಿಕಾಯಾಗ, ದೀಪದ ಬಲಿ, ನಡುಬಲಿ, ದರ್ಶನ ಬಲಿ, ಸವಾರಿ ಬಲಿ ಸಹಿತ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಏ.5ರಂದು ಮಧ್ಯಾಹ್ನ ರಥೋತ್ಸವ ನಡೆಯಲಿದ್ದು, ಏ.6ರಂದು ರಾತ್ರಿ 10 ಗಂಟೆಗೆ ಕೊಡಮಣಿತ್ತಾಯ ದೈವಕ್ಕೆ ಗಗ್ಗರ ಸೇವೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುದರ್ಶನ್ ಶೆಟ್ಟಿ ಹಕ್ಕೇರಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-29-1757140315

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.