ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳಪೆ ಆಹಾರ: ವಿದ್ಯಾರ್ಥಿನಿಯರು ಅಸ್ವಸ್ಥ

Last Updated 8 ಫೆಬ್ರುವರಿ 2023, 4:39 IST
ಅಕ್ಷರ ಗಾತ್ರ

ಮಂಗಳೂರು: ನಗರದ ‘ಸಿಟಿ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್ಸ್’ನ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿನಿ
ಯರು ಅಸ್ವಸ್ಥಗೊಂಡ ವಿಷಯ ತಿಳಿದು ಪೋಷಕರು ಸೋಮವಾರ ಹಾಸ್ಟೆಲ್‌ಗೆ ದೌಡಾಯಿಸಿದರು. ಹಾಸ್ಟೆಲ್‌ನ ಕಳಪೆ ಆಹಾರ ಹಾಗೂ ಸ್ವಚ್ಛ ಕುಡಿಯುವ ನೀರು ಒದಗಿಸದ ಬಗ್ಗೆ ಕಳವಳ ವ್ಯಕ್ತಪಡಿಸಿದರು.

‘ಕೆಲವು ವಿದ್ಯಾರ್ಥಿನಿಯರಿಗೆ ಶನಿವಾರ ಬೆಳಿಗ್ಗೆ ಉಪಾಹಾರ ಸೇವನೆ ಬಳಿಕ ಹೊಟ್ಟೆನೋವು ಕಾಣಿಸಿತ್ತು. ಭಾನುವಾರ ಮತ್ತಷ್ಟು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡರು. ಸೋಮವಾರ ರಾತ್ರಿ ವಾಂತಿ ಮತ್ತು ಉಸಿರಾಟದ ಸಮಸ್ಯೆ ಉಲ್ಬಣಿಸಿತು. ಆರೋಗ್ಯ ಅಧಿಕಾರಿ
ಗಳು ಸೂಚಿಸಿದ ಬಳಿಕವಷ್ಟೇ ನೀರು ಶುದ್ಧೀಕರಣ ಉಪಕರಣ ಸ್ವಚ್ಛಗೊಳಿಸಲಾಗಿದೆ. ಕಸ ವಿಲೇವಾರಿಗೂ ವ್ಯವಸ್ಥೆ ಇಲ್ಲ’ ಎಂದರು.

ಎಸಿಪಿ ಧನ್ಯಾ ಎನ್‌. ನಾಯಕ್‌ ನೇತೃತ್ವದಲ್ಲಿ ಹಾಸ್ಟೆಲ್‌ನ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿನಿಯರ ಪೋಷಕರ ಸಭೆ ನಡೆಯಿತು. ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ್‌ ಹಾಸ್ಟೆಲ್‌ಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಪೋಷಕರ ಜೊತೆ ಚರ್ಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT