ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ ಜಿಲ್ಲೆ: ಪಾಸಿಟಿವಿಟಿ ಶೇ 7.96ಕ್ಕೆ ಇಳಿಕೆ

Last Updated 20 ಜೂನ್ 2021, 6:07 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ 7.96ಕ್ಕೆ ಇಳಿದಿದೆ. ಜಿಲ್ಲೆಯಲ್ಲಿ ಒಟ್ಟು 832 ಜನರಿಗೆ ಕೋವಿಡ್‌–19 ದೃಢವಾಗಿದ್ದು, 552 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಮೃತಪಟ್ಟ 16 ಮಂದಿಗೆ ಕೋವಿಡ್–19 ಇರುವುದು ಶನಿವಾರ ದೃಢಪಟ್ಟಿದ್ದು, ಸಾವಿನ ಸಂಖ್ಯೆ 1,040ಕ್ಕೆ ಏರಿದೆ.

ಉಡುಪಿ: ಜಿಲ್ಲೆಯಲ್ಲಿ 174 ಮಂದಿಗೆ ಕೋವಿಡ್–19 ದೃಢವಾಗಿದ್ದು, 454 ಜನರು ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1,885 ಸಕ್ರಿಯ ಪ್ರಕರಣಗಳಿದ್ದು, ಮೃತಪಟ್ಟ ಇಬ್ಬರಿಗೆ ಕೋವಿಡ್ ಇರುವುದು ಶನಿವಾರ ಖಚಿತವಾಗಿದೆ.

ಕಾಸರಗೋಡು: ಜಿಲ್ಲೆಯಲ್ಲಿ ಶನಿವಾರ 493 ಮಂದಿಗೆ ಸೋಂಕು ದೃಢಪಟ್ಟಿದ್ದು, 539 ಮಂದಿ ಗುಣಮುಖರಾಗಿದ್ದಾರೆ. 3,459 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇದುವರೆಗೆ 79,866 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, 75,759 ಮಂದಿ ಗುಣಮುಖರಾಗಿದ್ದಾರೆ.

ಕ್ರೀಡಾಪಟುಗಳಿಗೆ ನಾಳೆ ಲಸಿಕೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಅಂತರ ರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ಲಸಿಕಾ ಶಿಬಿರವನ್ನು ಜೂ.21ರಂದು ಬೆಳಿಗ್ಗೆ 9.30ಕ್ಕೆ ನಗರದ ಯು.ಎಸ್.ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಲಸಿಕೆ ಪಡೆಯಲು ಇಚ್ಛಿಸುವ ಕ್ರೀಡಾಪಟುಗಳು ಆಧಾರ್ ಕಾರ್ಡ್, ಕ್ರೀಡಾ ಸಾಧನೆಯ ಪ್ರಮಾಣ ಪತ್ರದೊಂದಿಗೆ ಬೆಳಿಗ್ಗೆ 9.30ರೊಳಗೆ ಹಾಜರಿರುವಂತೆ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT