ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲ್ಕಿ: ಪಾವಂಜೆ ನಂದಿನಿ ನದಿಗೆ ಹಾರಿದ ಅಂಚೆ ಕಚೇರಿ ನೌಕರ ನಾಪತ್ತೆ

Last Updated 13 ಜುಲೈ 2022, 4:46 IST
ಅಕ್ಷರ ಗಾತ್ರ

ಮೂಲ್ಕಿ (ದಕ್ಷಿಣ ಕನ್ನಡ): ಮಂಡ್ಯ ಮೂಲದ ಪ್ರಸ್ತುತ ಮಂಗಳೂರು ಅಂಚೆ ಕಚೇರಿ ಉದ್ಯೋಗಿ ರಾಕೇಶ್ ಗೌಡ (26) ಪಾವಂಜೆ ಸೇತುವೆಯಿಂದ ನದಿಗೆ ಹಾರಿ ನಾಪತ್ತೆಯಾದ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

ನದಿಗೆ ಹಾರುವ ಮುನ್ನ ತನ್ನ ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ಬೈಕ್‌ನಲ್ಲಿ ಇಟ್ಟಿದ್ದರು ಎನ್ನಲಾಗಿದೆ.

ಅಲ್ಲದೆ ತಾನು ನದಿಗೆ ಹಾರುತ್ತಿರುವ ಕುರಿತು ಸಂಬಂಧಿಕರಿಗೆ ವಾಟ್ಸ್‌ಆ್ಯಪ್‌ನಲ್ಲಿ ಲೊಕೇಶನ್ ಕಳುಹಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಮುಲ್ಕಿ ಮತ್ತು ಸುರತ್ಕಲ್ ವ್ಯಾಪ್ತಿಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ರಾಕೇಶ್ ಗೌಡ ಅವರ ಮಾವ ಅಬಕಾರಿ ಇಲಾಖೆಯಲ್ಲಿ ಅಧಿಕಾರಿ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT