ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಂಡ: ದೂರು ಸಲ್ಲಿಸಲು ಪಾಲಿಕೆ ಸೂಚನೆ

Last Updated 13 ಆಗಸ್ಟ್ 2022, 3:00 IST
ಅಕ್ಷರ ಗಾತ್ರ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ರಸ್ತೆಗಳಲ್ಲಿ ಹೊಂಡ–ಗುಂಡಿಗಳು, ಅನಧಿಕೃತ ಅಗೆತದ ಬಗ್ಗೆ ದೂರುಗಳು ಇದ್ದಲ್ಲಿ ವಾಟ್ಸ್‌ಆ್ಯಪ್ ಸಂಖ್ಯೆ 9449007722 ಹಾಗೂ ಪಾಲಿಕೆಯ ಸಹಾಯವಾಣಿ ಸಂಖ್ಯೆ 0824–2220306 ಇಲ್ಲಿಗೆ ಸಲ್ಲಿಸಬಹುದು. ವಾರ್ಡ್‌ ಹಂತದಲ್ಲಿ ಸಂಬಂಧಪಟ್ಟ ವಾರ್ಡ್ ಎಂಜಿನಿಯರ್‌ ಸಂಪರ್ಕಿಸಬಹುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಜೂನ್, ಜುಲೈ ತಿಂಗಳುಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಿದೆ. ರಸ್ತೆಗಳಲ್ಲಿ ಉಂಟಾಗಿರುವ ಹೊಂಡಗಳ ದುರಸ್ತಿಗೆ ಕ್ರಮವಹಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ 24X7 ನೀರು ಸರಬರಾಜು ಯೋಜನೆ ಕಾಮಗಾರಿ, ಗೈಲ್ ಗ್ಯಾಸ್ ಕಂಪನಿಯ ಪೈಪ್‌ಲೈನ್ ಕಾಮಗಾರಿಗಳು ನಡೆಯುತ್ತಿವೆ. ಕಾಮಗಾರಿ ನಡೆದ ರಸ್ತೆಗಳ ಮರು ನಿರ್ಮಾಣವನ್ನು ಸಂಬಂಧಿಸಿದ ಇಲಾಖೆಯವರು ನಿರ್ವಹಿಸುತ್ತಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಗರದ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೊಂಚಾಡಿಯ ಆತಿಶ್ ಸಾವಿಗೆ ನ್ಯಾಯಕ್ಕಾಗಿ ಅವರ ಸ್ನೇಹಿತ ಲಿಖಿತ್ ರೈ ಗುರುವಾರ ನಗರದ ಮಹಾನಗರ ಪಾಲಿಕೆ ಕಚೇರಿ ಎದುರು ಏಕಾಂಗಿಯಾಗಿ ಮೌನ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೇ ಪಾಲಿಕೆ, ಹೊಂಡ–ಗುಂಡಿಗಳ ಸಮಸ್ಯೆ ಇದ್ದರೆ ದೂರು ಸಲ್ಲಿಸಲು ಸಲಹೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT