ಬೆಳ್ತಂಗಡಿ: ‘ನಗರ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೌರ ಕಾರ್ಮಿಕರು ಸಂವಿಧಾನಬದ್ಧ ಹಕ್ಕುಗಳಿಗೆ, ಪೌರ ಕಾರ್ಮಿಕರ ಮೇಲಿನ ದೌರ್ಜನ್ಯದ ವಿರುದ್ಧ ಸಂಘಟಿತ ಹೋರಾಟ ಮಾಡಬೇಕಾದ ಅಗತ್ಯವಿದೆ’ ಎಂದು ಪೌರ ಕಾರ್ಮಿಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಪಿ.ಆನಂದ ಹೇಳಿದರು.

ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಮಂಜುನಾಥ ಸ್ವಾಮಿ ಕಲಾ ಭವನದ ಪಿನಾಕಿ ಸಭಾಂಗಣದಲ್ಲಿ ಪಟ್ಟಣ, ಗ್ರಾಮ ಪಂಚಾಯಿತಿ ಪೌರ ಕಾರ್ಮಿಕರ ಜಂಟಿ ಸಮಾವೇಶವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ಬೆಳ್ತಂಗಡಿಯಲ್ಲಿ ಪಟ್ಟಣ ಮತ್ತು ಗ್ರಾಮ ಪಂಚಾಯಿತಿ ಪೌರ ಕಾರ್ಮಿಕರ ಜಂಟಿ ಸಮಾವೇಶ ನಡೆದಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಸಂಘಟನೆ ವಿಸ್ತರಿಸಲಾಗುವುದು. ಗ್ರಾಮೀಣ ಪ್ರದೇಶಗಳಲ್ಲಿ ಪೌರ ಕಾರ್ಮಿಕರನ್ನು ಜೀತದಾಳುಗಳಂತೆ ದುಡಿಸಲಾಗುತ್ತಿದೆ. ಕಾರ್ಮಿಕ ಕಾಯ್ದೆಗಳನ್ನು ಉಲ್ಲಂಘಿಸಿ ಕನಿಷ್ಠ ವೇತನ ನೀಡದೆ ದುಡಿಸುತ್ತಿರುವುದು ಅಪರಾಧವಾಗಿದೆ. ಪೌರ ಕಾರ್ಮಿಕರ ಶ್ರಮದ ಪ್ರತಿಫಲ ಸಂಜೀವಿನಿ ಒಕ್ಕೂಟ ಮತ್ತು ಅಧಿಕಾರಿಗಳ ಪಾಲಾಗುತ್ತಿರುವುದು ದುರಂತ. ಸ್ವಚ್ಛತಾ ಕಾರ್ಯಕ್ಕೆ ಸಂಬಂಧಿಸಿದ ಪ್ರಶಸ್ತಿಗಳು ಪೌರ ಕಾರ್ಮಿಕರಿಗೆ ಸಲ್ಲಬೇಕು ಎಂದರು.

‘ಮಹಿಳೆ, ಪುರುಷರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ದುಡಿಯುತ್ತಿರುವ ಪೌರ ಕಾರ್ಮಿಕರನ್ನು ತಕ್ಷಣ ಖಾಯಂಗೊಳಿಸಲು ಒತ್ತಾಯಿಸಿ ಸದ್ಯದಲ್ಲೇ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ಹೋರಾಟ ನಡೆಸಲಾಗುತ್ತದೆ’ ಎಂದರು.

ಸ್ವಚ್ಛತಾ ವಾಹನ ಚಾಲಕ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ವರುಣ್ ಮಾತನಾಡಿ, ಜಿಲ್ಲೆಯಲ್ಲಿ 600 ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗಿದೆ. ಇದು ಸಂಘಟನೆಯ ಹೋರಾಟದ ಫಲವಾಗಿದೆ ಎಂದರು.

ತಾಲ್ಲೂಕು ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಸುದೆಮುಗೇರು ಸಮಾವೇಶದ ಅಧ್ಯಕ್ಷತೆ ವಹಿಸಿ, ಭೇದಭಾವಗಳನ್ನು ಮರೆತು ನಮ್ಮೆಲ್ಲರ ಹಕ್ಕುಗಳಿಗಾಗಿ, ನಮ್ಮ ಮೇಲೆ ನಡೆಯುವ ವಿವಿಧ ರೀತಿಯ ದಬ್ಬಾಳಿಕೆಯ ವಿರುದ್ಧ ಸಂಘಟಿತರಾಗಬೇಕಾದ ಅಗತ್ಯವಿದೆ ಎಂದರು.

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ದುಡಿಯುತ್ತಿರುವ ಪೌರ ಕಾರ್ಮಿಕರು ತಮ್ಮ ವ್ಯಾಪ್ತಿಯ ಸಮಸ್ಯೆಗಳನ್ನು ಸಭೆಯ ಮುಂದಿಟ್ಟರು. ಸಂಜೀವಿನಿ ಒಕ್ಕೂಟ ಬೇಡ, ನೇರ ಪಾವತಿಯಾಗಬೇಕು. ಅಧಿಕಾರಿಗಳು, ಜನಪ್ರತಿನಿಧಿಗಳು ನಡೆಸುವ ದೌರ್ಜನ್ಯ, ಕಡಿಮೆ ವೇತನ, ವೇತನ ತಾರತಮ್ಯ, ವಾರದಲ್ಲಿ 2-3 ದಿನ ಕೆಲಸ, ಕಾನೂನುಬದ್ಧ ಸವಲತ್ತುಗಳ ನಿರಾಕರಣೆ ಬಗ್ಗೆ ಮಾತನಾಡಿದರು.

ಪೌರ ಕಾರ್ಮಿಕ ಸಂಘದ ಬೆಳ್ತಂಗಡಿ ತಾಲ್ಲೂಕು ಕಾರ್ಯದರ್ಶಿ ಚಂದ್ರ ಬೋವಿ, ಜತೆ ಕಾರ್ಯದರ್ಶಿ ಸುರೇಶ್ ಕೆ.ಅರಳಿ, ಗ್ರಾಮ ಪಂಚಾಯಿತಿ ಸ್ವಚ್ಛತಾ ಕಾರ್ಮಿಕರ ಸಂಘದ ಅಧ್ಯಕ್ಷೆ ರೇಣುಕಾ ಕುಕ್ಕೇಡಿ, ಕಾರ್ಯದರ್ಶಿ ಸುಮತಿ ವೇಣೂರು ಭಾಗವಹಿಸಿದ್ದರು.

ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಸ್ವಚ್ಛತಾ ವಾಹನದ ಚಾಲಕ ಶಿವಕುಮಾರ್ ಸ್ವಾಗತಿಸಿ ಶೇಖರ್ ಲಾಯಿಲ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.