ಬುಧವಾರ, ಮಾರ್ಚ್ 29, 2023
23 °C

ಪವರ್‌ ಲಿಫ್ಟಿಂಗ್ ಚಾಂಪಿಯನ್‌ಶಿಪ್ 27ರಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಬಾಲಾಂಜನೇಯ ಜಿಮ್ನಾಶಿಯಂನ 75ನೇ ವರ್ಷಾಚರಣೆಯ ಅಂಗವಾಗಿ ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಸಹಯೋಗದಲ್ಲಿ 47ನೇ ಪುರುಷರ ಹಾಗೂ 39ನೇ ಮಹಿಳೆಯರ ರಾಷ್ಟ್ರೀಯ ಸೀನಿಯರ್ ಪವರ್‌ ಲಿಫ್ಟಿಂಗ್ ಚಾಂಪಿಯನ್‌ಶಿಪ್-2022 ಸ್ಪರ್ಧೆಗಳನ್ನು ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ಏ.27ರಿಂದ 30ರವರೆಗೆ ಆಯೋಜಿಸಲಾಗಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮೂಡಾ ಮಾಜಿ ಅಧ್ಯಕ್ಷ ತೇಜೋಮಯ ಅವರು, ‘ದೇಶದ ವಿವಿಧ ಭಾಗಗಳಿಂದ ವಿಶ್ವ ಹಾಗೂ ಏಷ್ಯನ್ ದಾಖಲೆ ಮಾಡಿದ 500ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. 120 ತೀರ್ಪುಗಾರರು ಬರಲಿದ್ದಾರೆ’ ಎಂದರು.

ಏ.27ರಂದು ಸಂಜೆ 4 ಗಂಟೆಗೆ ಕ್ರೀಡಾಳುಗಳು ನಗರದ ಆಯ್ದ ರಸ್ತೆಗಳಲ್ಲಿ ತೆರೆದ ವಾಹನದಲ್ಲಿ ಸಾಗಿ, ಬಾಲಾಂಜನೇಯ ಜಿಮ್ನಾಶಿಯಂಗೆ ಭೇಟಿ ನೀಡುವರು. 5.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು ಎಂದು ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಕಾರ್ಯದರ್ಶಿ ಸತೀಶ್ ಕುಮಾರ್ ಕುದ್ರೋಳಿ ತಿಳಿಸಿದರು.

ಶಾಸಕ ವೇದವ್ಯಾಸ ಕಾಮತ್ ಸ್ಪರ್ಧೆಗೆ ಚಾಲನೆ ನೀಡಲಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸುವರು. ಕರ್ನಾಟಕದ ಪುರುಷರ ಮತ್ತು ಮಹಿಳೆಯರ ಅತ್ಯುತ್ತಮ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಲಿವೆ.
ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಸೀನಿಯರ್ ಪವರ್ ಲಿಫ್ಟರ್‌ಗಳು ಕೊಯಮುತ್ತೂರಿನಲ್ಲಿ ನಡೆಯಲಿರುವ ಏಷ್ಯನ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಏ.30ರಂದು ಸಂಜೆ 5.30ಕ್ಕೆ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ ಎಂದರು.

ಬಾಲಾಂಜನೇಯ ಜಿಮ್ನಾಶಿಯಂನ ಅಧ್ಯಕ್ಷ ಉಮೇಶ್ ಗಟ್ಟಿ, ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಷನ್‌ ಖಜಾಂಚಿ ಜಯರಾಂ ಎಂ., ಮಾಜಿ ಮೇಯರ್ ಪುರಂದರ ದಾಸ್ ಕೂಳೂರು ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು