ಬೆಳ್ತಂಗಡಿ: ‘ದೃಢಚಿತ್ತದಿಂದ ಉತ್ತಮ ವಿಚಾರಗಳನ್ನು ಅಳವಡಿಸಿಕೊಂಡು ಸಾಧನೆ ಮಾಡುವುದು ವಿದ್ಯಾರ್ಥಿಗಳ ಗುರಿಯಾಗಬೇಕು' ಎಂದು ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯಾನಂದ ಗೌಡ ಹೇಳಿದರು.

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ‘ಪ್ರಬೋಧ’ ಓರಿಯಂಟೇಷನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಯೌವ್ವನದ ಉತ್ಸಾಹದಲ್ಲಿ ತಪ್ಪು ನಿರ್ಧಾರ ಕೈಗೊಳ್ಳದೆ ಗುಣಾತ್ಮಕ ಚಿಂತನೆಗಳ ಮೂಲಕ ಯಶಸ್ಸು ಗಳಿಸಬೇಕು’ ಎಂದು ಅವರು ಹೇಳಿದರು. ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಗಣೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ ಲಿಮಿಟೆಡ್ನ ತೆರಿಗೆ ವಿಭಾಗದ ಅಧಿಕಾರಿ ಸನತ್ ಕುಮಾರ್ ಓರಿಯಂಟೇಷನ್ ನಡೆಸಿಕೊಟ್ಟರು. ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ ಇದ್ದರು. ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಸ್ವಾಗತಿಸಿದರು. ಉಪನ್ಯಾಸಕಿ ಮೀನಾಕ್ಷಿ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುರೇಂದ್ರ ವಂದಿಸಿದರು. ಸುಧೀರ್ ಕೆ.ಎನ್ ಮತ್ತು ಶಂಕರ್ ರಾವ್ ನಿಯಮಾವಳಿ ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.