ಭಾನುವಾರ, ಮಾರ್ಚ್ 26, 2023
23 °C

ಮಂಗಳೂರಿಗೆ ಬಂದಿದ್ದ ಪ್ರಣವ್‌ ಮುಖರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ರಾಷ್ಟ್ರಪತಿಯಾಗಿದ್ದ ಪ್ರಣವ್ ಮುಖರ್ಜಿ ಉಡುಪಿ ಜಿಲ್ಲೆಯ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಲು 2017 ರ ಜೂನ್‌ 18 ರಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು.

ಇಲ್ಲಿಂದ ಭಾರತೀಯ ವಾಯು ಸೇನೆಯ ಹೆಲಿಕಾಪ್ಟರ್‌ನಲ್ಲಿ ಅವರು ಉಡುಪಿಗೆ ತೆರಳಿದ್ದರು. ಅಂದಿನ ಮೇಯರ್‌ ಕವಿತಾ ಸನಿಲ್‌, ಆಗಿನ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಗೃಹ ಸಚಿವ ಕೆ.ಜೆ. ಜಾರ್ಜ್‌ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ್ದರು.

ಜೂನ್ 18 ರಂದು ಬೆಳಿಗ್ಗೆ 11 ಗಂಟೆಗೆ ನಗರಕ್ಕೆ ಬಂದಿದ್ದ ಪ್ರಣವ್ ಮುಖರ್ಜಿ, 11.25ಕ್ಕೆ ಆದಿ ಉಡುಪಿಯ ಹೆಲಿಪ್ಯಾಡ್‌ನಲ್ಲಿ ಇಳಿದಿದ್ದರು. ಉಡುಪಿ, ಕೊಲ್ಲೂರು ದೇವಸ್ಥಾನಗಳ ದರ್ಶನ ಪಡೆದು, ಮರಳಿ ಮಂಗಳೂರಿನ ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ತೆರಳಿದ್ದರು.

‘ಅಂದು ಅವರನ್ನು ಸ್ವಾಗತಿಸುವ ಅವಕಾಶ ನನಗೆ ಒದಗಿ ಬಂದಿತ್ತು. ಸರಳ ವ್ಯಕ್ತಿತ್ವದ, ಸಹೃದಯಿ ರಾಷ್ಟ್ರಪತಿಯನ್ನು ಅವರನ್ನು ಸ್ವಾಗತಿಸಿದ್ದು ಈಗಲೂ ನನಗೆ ಅವಿಸ್ಮರಣೀಯ ಕ್ಷಣವಾಗಿದೆ. ಅವರ ನಿಧನದ ಸುದ್ದಿ ಆಘಾತ ತಂದಿದೆ’ ಎಂದು ಮಾಜಿ ಮೇಯರ್‌ ಕವಿತಾ ಸನಿಲ್‌ ಸ್ಮರಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು