ಸೋಮವಾರ, ಡಿಸೆಂಬರ್ 5, 2022
22 °C

ದಿ.ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಮನೆ: ಕಾಮಗಾರಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಳ್ಯ(ದಕ್ಷಿಣ ಕನ್ನಡ): ಹತ್ಯೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ಬುಧವಾರ ಭೂಮಿ ಪೂಜೆ ನಡೆಯಿತು.

 ಪುರೋಹಿತರಾದ ಸುರೇಶ್ ಗುರಿಕಾರ ನೇತೃತ್ವದಲ್ಲಿ ವೈಧಿಕ ವಿಧಿ ವಿಧಾನಗಳು ನಡೆದು ಭೂಮಿ ಪೂಜೆ ನೆರವೇರಿತು. 

ಪ್ರವೀಣ್ ನೆಟ್ಟಾರು ಅವರ ತಂದೆ ಶೇಖರ ಪೂಜಾರಿ, ತಾಯಿ ರತ್ನಾವತಿ, ಪತ್ನಿ ನೂತನ ಕುಮಾರಿ ಹಾಗೂ ಕುಟುಂಬ ವರ್ಗದವರು ಭಾಗವಹಿಸಿದ್ದರು. 

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವುದಾಗಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಮುಖಂಡರು ಭರವಸೆ ನೀಡಿದ್ದರು. ಇದೀಗ ಮನೆ ನಿರ್ಮಾಣಕ್ಜೆ ಚಾಲನೆ ನೀಡಲಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ ‘ಪ್ರವೀಣ್ ನೆಟ್ಟಾರು ಅವರು ಬಿಜೆಪಿ ಪಕ್ಷಕ್ಕಾಗಿ ಮತ್ತು ಸಂಘಟನೆಗಾಗಿ ದುಡಿದಿದ್ದಾರೆ. ಅವರ ಅಗಲಿಕೆ ಪಕ್ಷಕ್ಕೆ, ಸಂಘಟನೆಗೆ ದೊಡ್ಡ ನಷ್ಟ. ಅವರ ಕುಟುಂಬದ ಜೊತೆಗೆ ಪಕ್ಷ ಮತ್ತು ಸಂಘಟನೆ ಇದೆ.‌ ಕುಟುಂಬಕ್ಕೆ ಎಲ್ಲಾ ಸಹಾಯ, ನೆರವು ನೀಡಲು ಬದ್ಧರಾಗಿದ್ದೇವೆ. ಆದರ ಮೊದಲ ಹಂತವಾಗಿ ಮನೆ ನಿರ್ಮಾಣ ಮಾಡಲು ಆರಂಭಿಸಲಾಗಿದೆ. ಸುಸಜ್ಜಿತ ಮನೆ ನಿರ್ಮಿಸಿ ಕೊಡಲಾಗುವುದು ಎಂದರು. 

ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ‌ ಸಾರಿಗೆ ಸಚಿವ ಎಸ್.ಅಂಗಾರ, ಸಮಾಜ‌ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ರಿ, ಪುತ್ತೂರು ಶಾಸಕ ಸಂಜೀವ ಮಠಂದೂರು, ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಮಾಜಿ ಶಾಸಕ ರುಕ್ಮಯ್ಯ ಪೂಜಾರಿ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಬೆಳ್ಳಾರೆ ಗ್ರಾಮ ಪಂಚಾಯತಿ ಅಧ್ಯಕ್ಷ ಚಂದ್ರಶೇಖರ ಪನ್ನೆ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್,ಮುರಳಿಕೃಷ್ಣ ಹಸಂತಡ್ಕ, ದಿನೇಶ್ ಮೆದು, ಜಗದೀಶ್ ಅಧಿಕಾರಿ, ಸುಧಾಕರ ರೈ ಮುಗೆರೋಡಿ, ಸಾಜಾ ರಾಧಾಕೃಷ್ಣ ಆಳ್ವ, ಆರ್.ಕೆ.ಭಟ್ ಕುರುಂಬಡೇಲು, ಕೆ.ಟಿ.ಸುವರ್ಣ, ಮಹೇಶ್ ಕುಮಾರ್ ಮೇನಾಲ, ಸುನಿಲ್ ಕೇರ್ಪಳ,ಆರ್.ಸಿ.ನಾರಾಯಣ ರೆಂಜ, ಗುರುದತ್ ನಾಯಕ್ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು