ಗುರುವಾರ , ಮಾರ್ಚ್ 23, 2023
29 °C
ಹೈ ಕಮಿಷನರ್ ವೆಬ್‌ಸೈಟ್‌ನಲ್ಲಿ ಪ್ರಕಟ

ವಿಶ್ವ ಸಂಸ್ಥೆ: ಪ್ರೀತಿ ಭಾಷಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಇಂಗ್ಲೆಂಡ್‌ನ ಲ್ಯಾಂಕೆಸ್ಟರ್ ವಿಶ್ವವಿದ್ಯಾಲಯದಲ್ಲಿ ಕಾನೂನು ವಿಷಯದಲ್ಲಿ ಪಿಎಚ್‌ಡಿ ಸಂಶೋಧನೆ ನಡೆಸುತ್ತಿರುವ ಮಂಗಳೂರಿನ ಪ್ರೀತಿ ಲೋಲಾಕ್ಷ ನಾಗವೇಣಿ ಈಚೆಗೆ ವಿಶ್ವ ಸಂಸ್ಥೆಯ 'ಮಹಿಳಾ ವಿರೋಧಿ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ' ಚರ್ಚೆಯಲ್ಲಿ ಭಾಷಣ ಮಂಡಿಸಿದ್ದಾರೆ.

‘ಲ್ಯಾಂಕೆಸ್ಟರ್ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿರುವ ಅಮಿತ್ ಆನಂದ್ ಅವರ ಜತೆ ಪ್ರೀತಿ ಭಾಷಣವನ್ನು  ಸಿದ್ಧಪಡಿಸಿದ್ದರು. ಪ್ರೀತಿ ಅವರು ವಿಶ್ವ ಸಂಸ್ಥೆಯ 'ಮಹಿಳಾ ವಿರೋಧಿ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ' ಯ 79ನೇ ಅಧಿವೇಶನದಲ್ಲಿ  'ಮೂಲನಿವಾಸಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಹಕ್ಕುಗಳ ಕುರಿತು ನಡೆದ ಚರ್ಚೆ'ಯಲ್ಲಿ ತಮ್ಮ ವಿಷಯ ಮಂಡನೆ ಮಾಡಿದ್ದಾರೆ’ ಎಂದು ಈ ಅಧಿವೇಶನವನ್ನು ಸಂಘಟಿಸಿರುವ ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್ ಕಚೇರಿ ವೆಬ್‌ಸೈಟ್‌ನಲ್ಲಿ ಮಂಗಳವಾರ ಪ್ರಕಟಿಸಿದೆ.

ಲ್ಯಾಂಕಸ್ಟರ್ ವಿಶ್ವವಿದ್ಯಾಲಯದಲ್ಲಿ ಮೂರು ಅಂತರರಾಷ್ಟ್ರೀಯ ಕಾನೂನು ಸಮ್ಮೇಳನಗಳನ್ನು ಸಂಘಟಿಸಿರುವ ಪ್ರೀತಿ, ಮಾನವ ಹಕ್ಕುಗಳ ಕಾರ್ಯಕರ್ತ ಲೋಲಾಕ್ಷ ಮತ್ತು ನಾಗವೇಣಿ ದಂಪತಿಯ ಪುತ್ರಿ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.