ಪುತ್ತೂರು: ನಗರದ ಚಿಕ್ಕಪುತ್ತೂರಿನಲ್ಲಿ ಭಾನುವಾರ ಏಳು ತಿಂಗಳ ಗರ್ಭಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಮುಖಂಡ ಚಿಂತನ್ ಅವರ ಪತ್ನಿ ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು. ಮಂಗಳೂರಿನ ಬೋಳಾರ ನಿವಾಸಿ ಜಯಂತ ಗುಜ್ರಾನ್ ಅವರ ಪುತ್ರಿಯಾದ ರೇಷ್ಮಾ ಮತ್ತು ಚಿಂತನ್ ಅವರ ವಿವಾಹ ನಾಲ್ಕು ವರ್ಷದ ಹಿಂದೆ ನಡೆದಿತ್ತು. ಈ ದಂಪತಿಗೆ ಎಳೆಯ ಪ್ರಾಯದ ಹೆಣ್ಣು ಮಗಳಿದ್ದು, ಸದ್ಯ ರೇಷ್ಮಾ ಅವರು 7 ತಿಂಗಳ ತುಂಬು ಗರ್ಭಿಣಿಯಾಗಿದ್ದರು.

ರೇಷ್ಮಾ ಅವರು ಭಾನುವಾರ ರಾತ್ರಿ ಚಿಕ್ಕಪುತ್ತೂರಿನ ಬಾಡಿಗೆ ಮನೆಯಲ್ಲಿ ಪತಿ ಮನೆಯಲ್ಲಿ ಇಲ್ಲದ ವೇಳೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೇಷ್ಮಾ ಅವರು ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತಳ ತಂದೆ ಜಯಂತ್ ಗುಜ್ರಾನ್ ಪೊಲೀಸರಿಗೆ ದೂರು ನೀಡಿದ್ದು, ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.