ಶುಕ್ರವಾರ, ಏಪ್ರಿಲ್ 16, 2021
25 °C

ಮಂಗಳೂರು ಮಹಾನಗರ ಪಾಲಿಕೆ: ಪ್ರೇಮಾನಂದ ಶೆಟ್ಟಿ ಮೇಯರ್, ಸುಮಂಗಲಾ ರಾವ್‌ ಉಪಮೇಯರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 22 ನೇ ಮೇಯರ್‌ ಆಗಿ ಪ್ರೇಮಾನಂದ ಶೆಟ್ಟಿ ಹಾಗೂ ಉಪ ಮೇಯರ್‌ ಆಗಿ ಸುಮಂಗಲಾ ರಾವ್‌ ಮಂಗಳವಾರ ಆಯ್ಕೆಯಾದರು.

ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ನ ಅನಿಲ್ ಕುಮಾರ್ ವಿರುದ್ದ ಬಿಜೆಪಿಯ ಪ್ರೇಮಾನಂದ ಶೆಟ್ಟಿ 46-14 ಮತಗಳಿಂದ ಗೆಲುವು ಸಾಧಿಸಿದರು.

ಉಪ ಮೇಯರ್‌ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ ನ ಜೆಸಿಂತಾ ವಿರುದ್ಧ ಸುಮಂಗಲಾ ರಾವ್‌ 46-14  ಮತಗಳಿಂದ ಗೆಲುವು ಸಾಧಿಸಿದರು.

ಮಂಗಳಾದೇವಿ ವಾರ್ಡ್‌ನಿಂದ ಆಯ್ಕೆಯಾಗಿರುವ ಪ್ರೇಮಾನಂದ ಶೆಟ್ಟಿ, ಹಿರಿತನವನ್ನು ಪರಿಗಣಿಸಿ ಪಕ್ಷವು ಆಯ್ಕೆ ಮಾಡಿದೆ. ಅವರು 5 ನೇ ಬಾರಿಗೆ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಸುಮಂಗಲಾ ರಾವ್‌ ಅವರು ಕುಂಜತ್ತ್‌ಬೈಲ್‌ ದಕ್ಷಿಣ ವಾರ್ಡ್‌ನಿಂದ ಆಯ್ಕೆಯಾಗಿದ್ದಾರೆ.

ಮೇಯರ್‌ ಸ್ಥಾನವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಹಾಗೂ ಉಪ ಮೇಯರ್‌ ಸ್ಥಾನವನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ನೀಡುವ ಮೂಲಕ ಪಕ್ಷದಲ್ಲಿ ಸಮತೋಲನ ಕಾಯ್ದುಕೊಳ್ಳಲಾಗಿದೆ.

ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿ 44, ಕಾಂಗ್ರೆಸ್‌ 14 ಹಾಗೂ ಎಸ್‌ಡಿಪಿಐ 2 ಸದಸ್ಯರು ಇದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು