ಮಂಗಳೂರು: ‘ಮೈಸೂರಿನಲ್ಲಿ ಕಂಬಳ ಆಯೋಜಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಂಬಳ ಅಸೋಸಿಯೇಶನ್ಗೆ ಮನವಿ ಮಾಡಿದ್ದಾರೆ. ಇಲ್ಲಿಯ ಕಂಬಳಗಳು ಮುಗಿದ ನಂತರ, ಮುಂದಿನ ಏಪ್ರಿಲ್ ವೇಳೆಗೆ ಅಲ್ಲಿ ಕಂಬಳ ಆಯೋಜನೆಯ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ’ ಎಂದು ರಾಜ್ಯ ಕಂಬಳ ಅಸೋಸಿಯೇಶನ್ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಶುಕ್ರವಾರ ಈ ಮಾಹಿತಿ ನೀಡಿದ ಅವರು, ‘ಕಂಬಳ ಸಮಿತಿಯ ತಜ್ಞರು ಈಗಾಗಲೇ ಮೈಸೂರಿಗೆ ಭೇಟಿನೀಡಿ, 10 ಎಕರೆ ಸರ್ಕಾರಿ ಜಾಗವನ್ನು ಗುರುತಿಸಿ, ಅಲ್ಲಿ ಕರೆ ನಿರ್ಮಾಣ ಸೇರಿದಂತೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿ ಬಂದಿದ್ದಾರೆ. ‘ರಾಜ್ಯದ ಯಾವ ಭಾಗದಲ್ಲಾದರೂ ಕಂಬಳ ಆಯೋಜಿಸಲು ಅಡ್ಡಿ ಇಲ್ಲ’ ಎಂದು ಹೈಕೋರ್ಟ್ ಈಗಾಗಲೇ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಕಂಬಳ ಆಯೋಜನೆಗೆ ತೊಂದರೆಯಾಗದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.