ಮಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳನ್ನು ತ್ವರಿತವಾಗಿ ಜಾರಿಗೊಳಿಸಬೇಕು. ಪ್ರವಾಸಿಗರನ್ನು ಜಿಲ್ಲೆಗೆ ಸೆಳೆಯುವುದಕ್ಕೆ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಗಳನ್ನು ರೂಪಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಿಗೆ ಸೂಚಿಸಿದರು.

ಬೆಂಗಳೂರಿನ ವಿಕಾಸ ಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ಜಿಲ್ಲೆಯ ನಿಯೋಗದ ಸದಸ್ಯರು ಮತ್ತು ರಾಜ್ಯ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳೊಂದಿಗೆ ಮಂಗಳವಾರ ಅವರು ಸಭೆ ನಡೆಸಿದರು. ಜಿಲ್ಲೆಯ 12 ಕಡಲ ಕಿನಾರೆ ಪ್ರವಾಸಿ ತಾಣಗಳ ಅಭಿವೃದ್ಧಿ ಕುರಿತು ವಿವರ ಪಡೆದ ಅವರು. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಇರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕುರಿತು ಸಮಾಲೋಚನೆ ನಡೆಸಿದರು.

‘ದಕ್ಷಿಣ ಕನ್ನಡ ಜಿಲ್ಲೆ ಕೋಮು ಸಂಘರ್ಷದ ನರಳಾಟದಿಂದ ಹೊರಬರುವಂತೆ ಮಾಡಬೇಕಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಿ ಉದ್ಯೋಗ ಸೃಷ್ಟಿಯಾದರೆ, ಇಂತಹ ಅಪರಾಧಿ ಚಟುವಟಿಕೆ ಕಡಿಮೆಯಾಗುತ್ತದೆ. ಅಭಿವೃದ್ಧಿಯತ್ತ ಜಿಲ್ಲೆಯು ಮುಖ ಮಾಡುವುದಕ್ಕೆ ಪ್ರವಾಸೋದ್ಯಮವನ್ನು ಪ್ರಮುಖ ಅಸ್ತ್ರವನ್ನಾಗಿ ಬಳಸಬೇಕು’ ಎಂದು ಸಚಿವರು ಸಲಹೆ ನೀಡಿದರು.

‘ಜಿಲ್ಲೆಯಲ್ಲಿ ಹೋಮ್ ಸ್ಟೇ ಗಳ ಸಂಖ್ಯೆ ಹೆಚ್ಚಿಸಲು ಒತ್ತು ನೀಡಬೇಕು. ಕರಾವಳಿ ತೀರದ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಯಲ್ಲಿ ಸ್ಥಳೀಯ ಮೀನುಗಾರರಿಗೆ ಆದ್ಯತೆ ಸಿಗಬೇಕು. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಇನ್ನಷ್ಟು ವಿಸ್ತೃತ ಚರ್ಚೆ ನಡೆಸಿ ಬಳಿಕ ಸ್ಥಳೀಯರೊಂದಿಗೆ ಸಮಾಲೋಚನೆ ಮಾಡೋಣ’ ಎಂದರು.

ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಕೆ.ವಿ.ರಾಜೇಂದ್ರ, ‘2024-29ರ ಅವಧಿಯ ಪ್ರವಾಸೋದ್ಯಮ ಯೋಜನೆಯಲ್ಲಿ ಕರಾವಳಿಗೆ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಉದ್ದೇಶಿಸಲಾಗಿದೆ. ಕಡಲ ಕಿನಾರೆಗಳ ಅಭಿವೃದ್ಧಿಗೆ ನಿರ್ದಿಷ್ಟ ಯೋಜನೆಗಳನ್ನು ರೂಪಿಸಲಾಗಿದೆ. ಸ್ಥಳೀಯರಿಗೆ ಉದ್ಯೋಗ ಹಾಗೂ ವ್ಯವಹಾರಕ್ಕೆ ಪೂರಕವಾಗುವಂತೆ ರೂಪರೇಷೆಗಳನ್ನು ಸಿದ್ಧಪಡಿಸಲಾಗಿದೆ’ ಎಂದು ತಿಳಿಸಿದರು.

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳ ಅನುಷ್ಢಾನ ಕುರಿತು ಮತ್ತೊಂದು ಸುತ್ತಿನ ಸಭೆ ನಡೆಸಿ ಅಂತಿಮ ನಿರ್ಣಯ ತೆಗೆದುಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಎಚ್, ಮೀನುಗಾರರ ಮುಖಂಡ ಚೇತನ್ ಬೇಂಗ್ರೆ, ಲಕ್ಷ್ಮಣ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.